ಕೂಡ್ಲಿಗಿ (ಬಳ್ಳಾರಿ ಜಿಲ್ಲೆ): ಪಟ್ಟಣದ ರಂಗ ಕಲಾವಿದೆ ಬಿ. ಶಿವಕುಮಾರಿ(56) ಹೃದಯಾಘಾತದಿಂದ ಶನಿವಾರ ನಿಧನರಾದರು. ಅವರಿಗೆ ಒಬ್ಬ ಪುತ್ರ ಇದ್ದಾರೆ.
1984ರಲ್ಲಿ ರಂಗಭೂಮಿ ಪ್ರವೇಶಿಸಿದ ಬಿ. ಶಿವಕುಮಾರಿ ಸಾಮಾಜಿಕ, ಪೌರಾಣಿಕ, ಐತಿಹಾಸಿಕ, ಭಕ್ತಿ ಪ್ರಧಾನ ನಾಟಕಗಳ ಜೊತೆಗೆ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ಅಭಿನಯಿಸಿದ್ದರು. ಧಾರವಾಡ ಆಕಾಶವಾಣಿಯ ನಾಟಕ ಕಲಾವಿದೆಯಾಗಿಯೂ ಆಗಿದ್ದರು. 59ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ, ಅಂದ್ರಪ್ರದೇಶದ ನಂದಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ಅವರು ಪಾತ್ರರಾಗಿದ್ದರು.
ಪಟ್ಟಣದ ಹೊಸಪೇಟೆ ರಸ್ತೆಯಲ್ಲಿನ ಶಾಂತಿ ಧಾಮದಲ್ಲಿ ಭಾನುವಾರ ಮಧ್ಯಾಹ್ನ 1ಕ್ಕೆ ಅಂತ್ಯಕ್ರಿಯೆ ನೆರೆವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.