ಮಂಗಳವಾರ, ಜನವರಿ 31, 2023
26 °C

ವಿಧಾನಸಭಾ ಕ್ಷೇತ್ರಗಳ ಮಾಹಿತಿ ಪಡೆದ ಅರುಣ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರದ ತುಂಗಭದ್ರಾ ಜಲಾಶಯದ ‘ವೈಕುಂಠ’ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಬುಧವಾರ ವಿಜಯನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮಾಹಿತಿ ಪಡೆದರು.

ವಿಜಯಪುರದಿಂದ ಮಂಗಳವಾರ ರಾತ್ರಿ ‘ವೈಕುಂಠ’ಕ್ಕೆ ಬಂದು ವಾಸ್ತವ್ಯ ಹೂಡಿದ್ದ ಅವರು ಬುಧವಾರ ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ ಅವರೊಂದಿಗೆ ಎಲ್ಲ ಕ್ಷೇತ್ರಗಳ ಮಾಹಿತಿ ಪಡೆದುಕೊಂಡರು. ಬೂತ್‌ ಸಶಕ್ತೀಕರಣ, ಪಕ್ಷ ಸಂಘಟನೆ, ಎಸ್ಟಿ ಮೋರ್ಚಾ ಸಮಾವೇಶದ ಸಿದ್ದತೆ ಕುರಿತು ಮಾಹಿತಿ ಪಡೆದರು.

‘ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಬೇಕು’ ಎಂದು ಅರುಣ್‌ ಸಿಂಗ್‌ ಸೂಚನೆ ಕೊಟ್ಟರು. ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು