ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ಜೂಜು ಅಡ್ಡೆಯ ಮೇಲೆ ದಾಳಿ: 37 ಮಂದಿ ವಶಕ್ಕೆ

Published 17 ಮಾರ್ಚ್ 2024, 16:12 IST
Last Updated 17 ಮಾರ್ಚ್ 2024, 16:12 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿಯ ಪಿ.ಡಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಚಾಗನೂರು ಎಂಬಲ್ಲಿನ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 37 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. 

ಜೂಜು ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತೆ ಹಿನ್ನೆಲೆಯಲ್ಲಿ ಸಿರಗುಪ್ಪ ವಿಭಾಗದ ಡಿವೈಎಸ್‌ಪಿ ಮಾರ್ಗದರ್ಶನದಲ್ಲಿ ಮೋಕಾ ಪೊಲಿಸ್ ಠಾಣೆ ಪಿಎಸ್‌ಐ ಕಾಳಿಂಗ ಮತ್ತು ಗ್ರಾಮಿಣ ಠಾಣೆ ಪಿಎಸ್‌ಐ ಸಂತೋಷ ಡಬ್ಬಿನ ನೇತೃತ್ವದಲ್ಲಿ ಶನಿವಾರ ಸಂಜೆ ದಾಳಿ ನಡೆಸಲಾಯಿತು.   

ಜೂಜಿನಲ್ಲಿ ಪಣಕ್ಕಿಟ್ಟಿದ್ದ ₹7,15,800ಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಕುರಿತ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ನ್ಯಾಯಾಲಯದ ಅನುಮತಿ ಆಧರಿಸಿ ಎಫ್‌ಐಆರ್‌ ದಾಖಲು ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT