ಬಳ್ಳಾರಿ: ‘ಶ್ರೀರಾಮುಲು ಅವರನ್ನು ಕೊಲ್ಲುವ ಉದ್ದೇಶದಿಂದ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಜ.1ರಂದು ಬ್ಯಾನರ್ ವಿಚಾರ್ ಮುಂದಿಟ್ಟುಕೊಂಡು ದಾಳಿ ಮಾಡಿದ್ದ’ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು, ಶ್ರೀರಾಮುಲು ಅವರನ್ನು ಸತೀಶ್ ರೆಡ್ಡಿ ನಿಂದಿಸಿ, ಹಲ್ಲೆಗೆ ಸೂಚಿಸಿದ್ದಾರೆ ಎನ್ನಲಾದ ವಿಡಿಯೊ ಬಿಡುಗಡೆ ಮಾಡಿ ಮಾತನಾಡಿದರು.

‘ಬ್ಯಾನರ್ ಅಳವಡಿಕೆ ಮಾಡುವ ವೇಳೆ ಶ್ರೀರಾಮುಲು ಅವರ ಜಾತಿ ಉಲ್ಲೇಖಿಸಿ ಸತೀಶ್ ರೆಡ್ಡಿ ತೆಲುಗಿನಲ್ಲಿ ನಿಂದಿಸಿ, ಹಲ್ಲೆ ಮಾಡಲು ಬೆಂಬಲಿಗರಿಗೆ ಸೂಚಿಸಿದ್ದಾರೆ. ‘ಈಗ ಬಿಟ್ಟರೆ ಮುಂದೆ ಸಿಗುವುದಿಲ್ಲ, ಹೊಡೆಯಿರಿ’ ಎಂದಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂಬುದು ಈ ಮೂಲಕ ಸಾಬೀತಾಗಿದೆ’ ಎಂದರು.

‘ಘರ್ಷಣೆ ಪ್ರಕರಣದಲ್ಲಿ ಸ್ಥಳ ಮಹಜರು, ಕೆಲ ಬುಲೆಟ್ಗಳ ವಶ ಬಿಟ್ಟರೆ ಬೇರೇನೂ ಆಗಿಲ್ಲ. ಎಎಸ್ಪಿ ರವಿಕುಮಾರ್, ಡಿವೈಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಅವರನ್ನು ಈ ಪ್ರಕರಣದಲ್ಲಿ ಸೇರಿಸಿಲ್ಲ. ಆದ್ದರಿಂದ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಲು ತೀರ್ಮಾನಿಸಲಾಗಿದೆ’ ಎಂದು ಜನಾರ್ದನ ರೆಡ್ಡಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.