ಕೂಡ್ಲಿಗಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂಡ ಅವರ ಅಮಾನತು ಅದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವಾಲ್ಮೀಕಿ ಮಹಾಸಭಾದ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ವಾಲ್ಮೀಕಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಸುರೇಶ್ ಮಾತನಾಡಿ, ಆರ್ಸಿಬಿ ವಿಜಯೋತ್ಸದ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಬೆಂಗಳೂರು ನಗರ ಆಯುಕ್ತರಾಗಿದ್ದ ವಾಲ್ಮೀಕಿ ಸಮಾಜದ ಬಿ. ದಯಾನಂದ ಸೇರಿದಂತೆ ಇತರೆ ಅಧಿಕಾರಿಗಳನ್ನು ಅಮಾನತು ಮಾಡಿದ ಸರ್ಕಾರದ ಕ್ರಮವನ್ನು ವಾಲ್ಮೀಕಿ ಸಮಾಜ ಖಂಡಿಸುತ್ತದೆ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ದಕ್ಷ ಅಧಿಕಾರಿಗಳ ಅಮಾನತು ಅದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಕೆ. ಈಶಪ್ಪ, ವಾಲ್ಮೀಕಿ ಸಮಾಜದ ಮುಖಂಡರಾದ ಸಿರಿಬಿ ಅಂಜಿನಪ್ಪ, ಡಿಎಸ್ ಎಸ್ ಜಿಲ್ಲಾ ಸಂಚಾಲಕ ಎಸ್. ದುರುಗೇಶ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್. ವೀರಣ್ಣ, ಡಾಣಿ ರಾಘವೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.