ಬಳ್ಳಾರಿ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಕೋರಿ ಎಐಕೆಕೆಎಂಎಸ್ ರೈತ ಸಂಘಟನೆ ವತಿಯಿಂದ ಬಳ್ಳಾರಿ ತಹಶೀಲ್ದಾರ್ಗೆ ಬುಧವಾರ ಮನವಿ ಸಲ್ಲಿಸಲಾಯಿತು.

‘ಬಳ್ಳಾರಿ ತಾಲ್ಲೂಕಿನಲ್ಲಿ ಸುಮಾರು 40ರಿಂದ 50 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿ, ಅವರಿಂದ ಅರ್ಜಿಗಳನ್ನು ಸ್ವೀಕರಿಸಿ ಸುಮಾರು ವರ್ಷಗಳೇ ಕಳೆದಿವೆ. ಆದರೆ ಹಕ್ಕುಪತ್ರ ಮಾತ್ರ ಸಿಕ್ಕಿಲ್ಲ’ ಎಂದು ಸಂಘಟನೆ ಮುಖಂಡರು ಆರೋಪಿಸಿದರು.

‘ಬಗರ್ ಹುಕುಂ ಭೂಮಿ ಮೇಲೆ ಅವಲಂಬಿತವಾಗಿರುವ ಸಾಕಷ್ಟು ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಈ ರೈತರಿಗೆ ಜೀವನ ಸಾಗಿಸಲು ಬೇರೆ ಯಾವುದೇ ಭೂಮಿ ಇಲ್ಲ. ಈಗ ಇರುವ ಭೂಮಿಗೆ ಹಕ್ಕುಪತ್ರ ಇಲ್ಲದ್ದರಿಂದ ಯಾವುದೇ ರೀತಿಯ ಸರ್ಕಾರಿ ಸೌಲಭ್ಯ ಮತ್ತು ಬ್ಯಾಂಕ್ ಸೌಲಭ್ಯ ಸಿಗದಂತಾಗಿವೆ. ಹಾಗಾಗಿ ಹಕ್ಕುಪತ್ರ ವಿತರಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್, ಜಿಲ್ಲಾ ಸಮಿತಿ ಸದಸ್ಯರಾದ ಧನರಾಜ್, ನಾಗಭೂಷಣ, ಹನುಮಂತ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.