ಬಳ್ಳಾರಿ: ಜಿಲ್ಲೆಯ ಹಲವೆಡೆ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ತೀವ್ರ ವೇಗ ಪಡೆದುಕೊಂಡಿವೆ. ಬೇಡಿಕೆಗೆ ತಕ್ಕಂತೆ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಲಭ್ಯವಿರುವುದಾಗಿ ಕೃಷಿ ಇಲಾಖೆ ತಿಳಿಸಿದೆ.

ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆಯು 599.0 ಮಿ.ಮೀ. ಮೇ 31ರ ಅಂತ್ಯಕ್ಕೆ ಸರಾಸರಿ 74.4 ಮಿ.ಮೀ ಮಳೆಯಾಬೇಕು. ಸದ್ಯ 72.4 ಮಿ.ಮೀ ನಷ್ಟು ಮಳೆಯಾಗಿದೆ. ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಒಟ್ಟು 1,59,546 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ. ಸೋಮಸುಂದರ್ ತಿಳಿಸಿದ್ದಾರೆ.

15 ಕೇಂದ್ರಗಳ ಬೀಜ ವಿತರಣೆ: ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸಲು ಕೃಷಿ ಇಲಾಖೆ ಸಜ್ಜಾಗಿದೆ. ಜಿಲ್ಲೆಯ 13 ರೈತ ಸಂಪರ್ಕ ಕೇಂದ್ರಗಳು ಹಾಗೂ 2 ಹೆಚ್ಚುವರಿ ಕೇಂದ್ರಗಳು ಸೇರಿದಂತೆ ಒಟ್ಟು 15 ಕೇಂದ್ರಗಳ ಮೂಲಕ ವಿವಿಧ ಬೆಳೆಗಳ ಬಿತ್ತನೆ ಬೀಜಗಳನ್ನು ಸಹಾಯಧನದಲ್ಲಿ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 7,115 ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, ಸದ್ಯ 10,415 ಕ್ವಿಂಟಾಲ್ನಷ್ಟು ದೊಡ್ಡ ಪ್ರಮಾಣದ ದಾಸ್ತಾನು ಲಭ್ಯವಿದೆ ಎಂದು ಇಲಾಖೆ ಹೇಳಿದೆ.

ರೈತರಿಗೆ ಪ್ರಮುಖ ಸೂಚನೆ: ಮಣ್ಣಿನಲ್ಲಿ ಅವಶ್ಯಕ ತೇವಾಂಶವಿದ್ದಾಗ ಹಾಗೂ ಮುಂದಿನ 3-4 ದಿನಗಳಲ್ಲಿ ಮಳೆ ಬರುವ ಮುನ್ಸೂಚನೆ ಇದ್ದಾಗ ಮಾತ್ರ ಬಿತ್ತನೆಗೆ ಮುಂದಾಗಬೇಕು ಎಂದು ರೈತರಿಗೆ ಸಲಹೆ ನೀಡಲಾಗಿದೆ.

ಎಫ್ಐಡಿ ಮೂಲಕ ಯೂರಿಯಾ ವಿತರಣೆ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 1,03,778 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಸದ್ಯ 47,533.23 ಮೆಟ್ರಿಕ್ ಟನ್ ದಾಸ್ತಾನಿದೆ. ಯುದ್ಧಗಳ ಹಿನ್ನೆಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಭವಿಷ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ರೈತರಿಗೆ ಯೂರಿಯಾವನ್ನು ಸಮರ್ಪಕವಾಗಿ ಒದಗಿಸಲು ಹಾಗೂ ಕಾಳಸಂತೆ ಮಾರಾಟವನ್ನು ತಡೆಗಟ್ಟಲು ಸರ್ಕಾರದ ಆದೇಶದಂತೆ ಕಡ್ಡಾಯವಾಗಿ ಎಫ್ಐಡಿ (ಫಾರ್ಮರ್ ಐಡಿ) ಮೂಲಕವೇ ಯೂರಿಯಾ ವಿತರಿಸಲಾಗುವುದು ಎಂದೂ ಇಲಾಖೆ ಹೇಳಿದೆ.

ರೈತರು ಕೇವಲ ಯೂರಿಯಾ ಮಾತ್ರ ಅವಲಂಬಿಸದೆ, ಸಾರಜನಕ ಒದಗಿಸುವ ಇತರೆ ರಸಗೊಬ್ಬರಗಳನ್ನೂ ಬಳಸಬೇಕೆಂದು ಮನವಿ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-25-583426592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.