ಬಳ್ಳಾರಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಾದ್ಯಂತ ಕೈಗೊಂಡಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಬಳ್ಳಾರಿ ನಗರದ ಗುಗ್ಗರಹಟ್ಟಿಯ ವೆಂಕಟಮ್ಮ ಕಾಲೋನಿಯಲ್ಲಿ ಸೋಮವಾರ ಚಾಲನೆ ನೀಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಸಮೀಕ್ಷೆಯು ಆರಂಭಗೊಂಡಿದೆ. ಈ ಸಮೀಕ್ಷಾ ಕಾರ್ಯವು ಅಕ್ಟೋಬರ್ 7 ರ ವರೆಗೆ ನಡೆಯಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. 60 ಪ್ರಶ್ನಾವಳಿಗಳುಳ್ಳ ಸಮೀಕ್ಷಾ ಕಾರ್ಯವು ಆ್ಯಪ್ ಮೂಲಕ ನಡೆಯಲಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಕೋರಿದರು.

‘ಸಮೀಕ್ಷಾ ಕಾರ್ಯಕ್ಕೆ ತರಬೇತಿ ಪಡೆದ ಮಾಸ್ಟರ್ ಟ್ರೇನರ್ಗಳು ತಮ್ಮ ಕೆಳಹಂತದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಮಾರ್ಗದರ್ಶನ ನೀಡಿದ್ಧಾರೆ. ಪ್ರತಿ 108 ಮನೆಗಳಿಗೆ ಒಬ್ಬ ಗಣತಿದಾರ, 20 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರಂತೆ ನೇಮಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಯಾವ ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ’ ಎಂದರು.

ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಸಮೀಕ್ಷಾದಾರರು, ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.