ಬಳ್ಳಾರಿ: ‘ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಮೇ 19ರ ರಾತ್ರಿಯಿಂದಲೇ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಲಿದೆ’ ಎಂದು ಸಾರಿಗೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆದಿಮೂರ್ತಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿಗೊಳಿಸಿ ನೌಕರರನ್ನು ಬೆದರಿಸಲು ಸರ್ಕಾರ ಯತ್ನಿಸುತ್ತಿದೆ. ಆದರೆ, ಇಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ’ ಎಂದು ಎಚ್ಚರಿಸಿದರು.

‘ರಾಜ್ಯದಾದ್ಯಂತ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಇದರಿಂದ ಸಾರ್ವಜನಿಕರಿಗೆ ಉಂಟಾಗುವ ಅನನುಕೂಲಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ’ ಎಂದರು.

ಮುಷ್ಕರ ಕುರಿತ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-724904514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.