ಬಳ್ಳಾರಿ: ನಗರದ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಮಳಿಗೆಯೊಂದರಲ್ಲಿ ವ್ಯಾಪಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾನಗರದ 5ನೇ ಕ್ರಾಸ್ ನಿವಾಸಿ ಕಾಳಿ ಸುಬ್ರಮಣ್ಯ (48) ಮೃತ. ನಗರದ ಬುಡಾ ಕಾಂಪ್ಲೆಕ್ಸ್ನ ಮಳಿಗೆಯೊಂದರಲ್ಲಿ ಸುಬ್ರಮಣ್ಯ ವ್ಯಾಪಾರ ನಡೆಸುತ್ತಿದ್ದರು. ತಮ್ಮ ವ್ಯವಹಾರಕ್ಕಾಗಿ ವಿವಿಧ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಹಾಗೂ ಪರಿಚಯಸ್ಥರಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ಫೆ. 7 ರಂದು ಮಧ್ಯಾಹ್ನ 3ರಿಂದ ರಾತ್ರಿ 7:45ರ ನಡುವಿನ ಅವಧಿಯಲ್ಲಿ ತಮ್ಮ ಮಳಿಗೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ತೀರಿಸುವ ಚಿಂತೆಯಲ್ಲಿದ್ದ ಅವರು ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ. ಅವರ ಸಾವಿನಲ್ಲಿ ನಮಗೆ ಯಾವುದೇ ಸಂಶಯವಿಲ್ಲ ಎಂದು ಮೃತರ ಪತ್ನಿ ವಿಶಾಲಾಕ್ಷಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.