ಬಳ್ಳಾರಿ: ಕೇಂದ್ರ ಸರ್ಕಾರ ಆರಂಭಿಸಿರುವ ಜನಗಣತಿ ಅಭಿಯಾನದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗಿಯಾಗಬೇಕು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಶಾಸಕ ನಾರಾ ಭರತ್ ರೆಡ್ಡಿ ಅವರು ನಗರದ 37ನೇ ವಾರ್ಡ್ನ ದೇವಿನಗರದಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಮಹಾನಗರ ಪಾಲಿಕೆಯ ವತಿಯಿಂದ ಜನಗಣತಿ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ಮನೆಮನೆಗೆ ಬರುವ ಅಧಿಕಾರಿಗಳಿಗೆ ಜನರು ಸಹಕರಿಸಿ ಅಭಿಯಾನ ಯಶಸ್ವಿಗೊಳಿಸಬೇಕು. ಎಂದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗಿದೆ. ವಾರ್ಡ್ 37 ಮತ್ತು 38ರಲ್ಲಿ ರಸ್ತೆ, ಚರಂಡಿ ಹಾಗೂ ಪೇವರ್ಸ್ ಕಾಮಗಾರಿಗಳಿಗೆ ತಲಾ ₹2 ಕೋಟಿ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಲಾಗಿದೆ. ತುಂಗಭದ್ರಾ ಜಲಾಶಯದಿಂದ 400 ಕ್ಯೂಸೆಕ್ ನೀರು ಬಿಡುಗಡೆ ಆದೇಶದಿಂದ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-25-1995345404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.