ಬಳ್ಳಾರಿ: ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಾರಕ ಗರ್ಭಕಂಠ ಕ್ಯಾನ್ಸರ್ (ಸರ್ವಿಕಲ್ ಕ್ಯಾನ್ಸರ್) ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯಾದ್ಯಂತ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. 14 ವರ್ಷದ ಒಟ್ಟು 5,658 ಹೆಣ್ಣು ಮಕ್ಕಳಿಗೆ ಈಗಾಗಲೇ ಯಶಸ್ವಿಯಾಗಿ ಎಚ್.ಪಿ.ವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ವಿತರಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 16,495 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈವರೆಗೆ ಶೇ 34ರಷ್ಟು ಪ್ರಗತಿ ಸಾಧಿಸಲಾಗಿದೆ. ತಾಲ್ಲೂಕುವಾರು ವಿವರ ನೋಡುವುದಾದರೆ, ಬಳ್ಳಾರಿಯಲ್ಲಿ 2,324, ಸಿರಗುಪ್ಪದಲ್ಲಿ 1,453, ಸಂಡೂರಿನಲ್ಲಿ 881, ಕುರುಗೋಡಿನಲ್ಲಿ 630 ಹಾಗೂ ಕಂಪ್ಲಿಯಲ್ಲಿ 370 ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ‘ಅಸುರಕ್ಷಿತ ಸಂಪರ್ಕ ಹಾಗೂ ವೈಯಕ್ತಿಕ ಶುಚಿತ್ವದ ಕೊರತೆಯಿಂದ ಹರಡುವ ಹೆಚ್.ಪಿ.ವಿ ಸೋಂಕು ಭವಿಷ್ಯದಲ್ಲಿ ಕ್ಯಾನ್ಸರ್ ಆಗಿ ಮಾರ್ಪಡುತ್ತದೆ. 14 ವರ್ಷದ ಹರೆಯದಲ್ಲೇ ಲಸಿಕೆ ಪಡೆಯುವುದರಿಂದ ಇದನ್ನು ಶೇ 99ರಷ್ಟು ತಡೆಯಬಹುದು. ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ.

ಮಾರ್ಚ್ 11 ರಿಂದ ಆರಂಭವಾಗಿರುವ ಈ 90 ದಿನಗಳ ಅಭಿಯಾನದಲ್ಲಿ ಲಸಿಕೆ ಪಡೆಯಲು ಮಗುವಿನ ಜನನ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಇದುವರೆಗೆ ಲಸಿಕೆ ಪಡೆದ ಮಕ್ಕಳಲ್ಲಿ ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ ಎಂದು ಆರ್.ಸಿ.ಹೆಚ್ ಅಧಿಕಾರಿ ಡಾ. ಹನುಮಂತಪ್ಪ ತಿಳಿಸಿದ್ದಾರೆ. ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ಪೋಷಕರು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-629669135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.