ಬಳ್ಳಾರಿ: ‘ಛಲವಾದಿ ಸಮುದಾಯದ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಒಕ್ಕೂಟದಿಂದ ಸ್ಥಾಪಿಸಲಾದ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 31ರಂದು ಬೆಳಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಗೂಳಪ್ಪ ಬೆಳ್ಳೇಕಟ್ಟೆ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಛಲವಾದಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಗೌರವ ಪುರಸ್ಕಾರ ನೀಡಿ ಗೌರವಿಸಲಾಗುವುದು’ ಎಂದು ಹೇಳಿದರು.

ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಮಾಜಿ ಅಧ್ಯಕ್ಷ ಮಾನಯ್ಯ ಹಾಗೂ ಮಾಜಿ ರಾಜ್ಯಾಧ್ಯಕ್ಷ ಎಚ್.ಕೆ. ಬಸವರಾಜು ಅವರು ಗೌರವ ಪುರಸ್ಕಾರ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿ.ನರಸಪ್ಪ, ಹನುಮಪ್ಪ, ಸೋಮನಾಥ್, ಸಿ. ಮಂಜುನಾಥ್, ಜೆ.ಎಸ್. ಶ್ರೀನಿವಾಸುಲು, ಹನುಮೇಶ್ ಕಟ್ಟೆಮಾನಿ, ಶಂಕರ್ ಹಾಗೂ ವಿಲಾಸ್ ಮನಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-579157316

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.