ಬಳ್ಳಾರಿ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮಹಮ್ಮದ್ ಹಾರೀಸ್ ಸುಮೇರ್, ಇದನ್ನು ತಡೆಗಟ್ಟಲು ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಅಪ್ರಾಪ್ತರ ಗರ್ಭಧಾರಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗದಿರುವುದು ಜಿಲ್ಲೆಯ ಸಾಮಾಜಿಕ ಬೆಳವಣಿಗೆಯ ಅತಿ ದೊಡ್ಡ ವೈಫಲ್ಯ. ಇದನ್ನು ತಡೆದರೆ ಮಾತ್ರ ಶಿಕ್ಷಣ ಮತ್ತು ಪೌಷ್ಟಿಕಾಂಶದ ಮಟ್ಟ ಸುಧಾರಿಸಲು ಸಾಧ್ಯ ಎಂದು ಸಿಇಒ ಅಭಿಪ್ರಾಯಪಟ್ಟರು.

ಸಂಡೂರು ಮತ್ತು ಶಿಡಿಗಿನಮೊಳ ಭಾಗಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಿವೆ. ಸಂಡೂರಿನಲ್ಲಿ ಕೇವಲ 32 ಕೆಜಿ ತೂಕವಿದ್ದ 16 ವರ್ಷದ ಗರ್ಭಿಣಿ ಬಾಲಕಿ ಮೃತಪಟ್ಟ ಘಟನೆಯನ್ನು ಸಿಇಒ ಸಭೆಯಲ್ಲಿ ಉಲ್ಲೇಖಿಸಿದರು.

ಸಮಸ್ಯಾತ್ಮಕ ಗ್ರಾಮ ಪಂಚಾಯಿತಿಗಳಲ್ಲಿ ಧಾರ್ಮಿಕ ಮುಖಂಡರು ಹಾಗೂ ಮದುವೆ ಮಾಡಿಸುವವರಿಂದ ‘ನಾವು ಬಾಲ್ಯವಿವಾಹ ಮಾಡಿಸುವುದಿಲ್ಲ’ ಎಂದು ಕಡ್ಡಾಯವಾಗಿ ಬಾಂಡ್ ಪೇಪರ್ ಮೇಲೆ ಸಹಿ ಪಡೆಯಲು ಜೂನ್ ಅಂತ್ಯದವರೆಗೆ ಗಡುವು ನೀಡಲಾಯಿತು.

ಸಂಡೂರು ಭಾಗದ ಗರ್ಭಿಣಿಯರಿಗೆ ತುರ್ತು ಸಂದರ್ಭದಲ್ಲಿ ಬಳ್ಳಾರಿಗೆ ಬರಲು ವಿಳಂಬವಾಗುವುದನ್ನು ತಪ್ಪಿಸಲು, ಹತ್ತಿರದ ಜಿಂದಾಲ್ನ ಜೆಎಸ್ಡಬ್ಲ್ಯೂ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕ್ರಮ ವಹಿಸುವಂತೆ ಆರೋಗ್ಯ ಇಲಾಖೆಗೆ ಸಿಇಒ ತಿಳಿಸಿದರು.

ಖಾಸಗಿ ಹಾಸ್ಟೆಲ್ಗಳಲ್ಲಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡದ ಹಾಸ್ಟೆಲ್ಗಳ ನೋಂದಣಿ ರದ್ದುಪಡಿಸಲು ಆದೇಶಿಸಿದರು.

ಒತ್ತಡಕ್ಕೆ ಮಣಿಯಬೇಡಿ: ಬಾಲ್ಯವಿವಾಹ ಪ್ರಕರಣಗಳಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಎಫ್ಐಆರ್ ದಾಖಲಿಸಿ. ಶಾಲಾ ದಾಖಲೆಗಳ ಮೂಲಕ ವಯಸ್ಸನ್ನು ದೃಢೀಕರಿಸಿ ತಪ್ಪಿತಸ್ಥರಿಗೆ ಕಾನೂನಿನ ಭಯ ಹುಟ್ಟಿಸಿ ಎಂದು ಸಿಇಒ ಸುಮೇರ್ ಅಧಿಕಾರಿಗಳಿಗೆ ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಹೆಚ್ಚುವರಿ ಎಸ್ಪಿ ನವೀನ್ ಕುಮಾರ್, ಡಿವೈಎಸ್ಪಿ ಗೋವಿಂದರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-907001442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.