ಬಳ್ಳಾರಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೆಣಸಿನಕಾಯಿ ಬೆಳೆಗಾರರು ಹಾಗೂ ನರ್ಸರಿ ಮಾಲೀಕರು ಬೆಳೆ ನಷ್ಟ ಮತ್ತು ವಂಚನೆಗೆ ಒಳಗಾಗದಂತೆ ತಡೆಯಲು ತೋಟಗಾರಿಕೆ ಇಲಾಖೆಯು ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಇವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ್ ಕೋಟಿಮನೆ ತಿಳಿಸಿದ್ದಾರೆ.

ಜಿಲ್ಲೆಯ ರೈತರು ಮೆಣಸಿನಕಾಯಿ ಸಸಿಗಳನ್ನು ಕಡ್ಡಾಯವಾಗಿ ಜಿ.ಎಸ್.ಟಿ ನೋಂದಣಿ ಹೊಂದಿರುವ ಅಧಿಕೃತ ನರ್ಸರಿಗಳಿಂದಲೇ ಖರೀದಿಸಿ ನಾಟಿ ಮಾಡಬೇಕು. ಸಸಿ ಖರೀದಿಸಿದ ಬಿಲ್ಲನ್ನು ಪಹಣಿಯಲ್ಲಿರುವ ರೈತರ ಹೆಸರಿನಲ್ಲಿಯೇ ಪಡೆಯಬೇಕು. ಈ ರಸೀದಿಯನ್ನು ಬೆಳೆ ಸಂಪೂರ್ಣವಾಗಿ ಮಾರಾಟವಾಗುವವರೆಗೂ ಜೋಪಾನವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ರೈತರು ಯಾವುದೇ ಕಾರಣಕ್ಕೂ ಅನಧಿಕೃತ ಬಿಡಿ ಬೀಜಗಳನ್ನು ಖರೀದಿಸಬಾರದು. ಒಂದು ವೇಳೆ ಇಂತಹ ಬೀಜಗಳನ್ನು ಖರೀದಿಸಿ ನಷ್ಟ ಅನುಭವಿಸಿದರೆ ಅದಕ್ಕೆ ತೋಟಗಾರಿಕೆ ಇಲಾಖೆ ಅಥವಾ ಜಿಲ್ಲಾಡಳಿತ ಯಾವುದೇ ಜವಾಬ್ದಾರಿ ಹೊರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರೈತರು ಕೇವಲ ಒಂದೇ ಕಂಪನಿಯ ಬೀಜಗಳ ಮೇಲೆ ಅವಲಂಬಿತರಾಗದೆ, ಮಾರುಕಟ್ಟೆಯಲ್ಲಿ ಲಭ್ಯವಿರುವ ಅಧಿಕ ಇಳುವರಿ ನೀಡುವ ಇತರೆ ಕಂಪನಿಗಳ ಬೀಜಗಳನ್ನೂ ಖರೀದಿಸಬಹುದು. ಸಸಿ ನಾಟಿ ಮಾಡುವ ಮುನ್ನ ಬೀಜೋಪಚಾರ ಮಾಡಿಕೊಳ್ಳುವುದು ಉತ್ತಮ ಎಂದು ತಿಳಿಸಿದ್ದಾರೆ.

ನರ್ಸರಿ ಮಾಲೀಕರು, ಬೀಜ ವ್ಯಾಪಾರಿಗಳಿಗೆ ಸೂಚನೆ: ಬೀಜ ಮಾರಾಟಗಾರರು ಕಡ್ಡಾಯವಾಗಿ ಇಲಾಖೆಯಿಂದ ಪರವಾನಗಿ ಪಡೆದಿರಬೇಕು. ನರ್ಸರಿಗಳು ರೈತರಿಂದ ಬೀಜ ಪಡೆಯುವಾಗ ಜಿ.ಎಸ್.ಟಿ ರಸೀದಿಯನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡೇ ಸಸಿ ಮಾಡಬೇಕು. ಬಳಸುವ ಬೀಜ, ಗೊಬ್ಬರ, ಕೀಟನಾಶಕ ಹಾಗೂ ಸಸಿ ವಿತರಣೆಯ ವಿವರಗಳನ್ನು ಒಳಗೊಂಡ ರಿಜಿಸ್ಟರ್ ಕಡ್ಡಾಯವಾಗಿ ನಿರ್ವಹಿಸಬೇಕು. ಕಳೆದ ಬಾರಿ ರೈತರು ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ, ನರ್ಸರಿಗಳು ಹಳೆಯ ದರದಲ್ಲೇ ಉತ್ತಮ ಗುಣಮಟ್ಟದ ಸಸಿಗಳನ್ನು ಪೂರೈಸಬೇಕು ಎಂದು ಕೋಟಿಮನೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-178922663

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.