ಬಳ್ಳಾರಿ: ‘ಜಿಲ್ಲೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಅಧಿಕಾರಿಗಳು ಲಂಚಕ್ಕಾಗಿ ಬಡವರನ್ನು ಹಿಂಸಿಸುತ್ತಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮೀನಳ್ಳಿ ತಾಯಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ‘ಮೀನಳ್ಳಿ ಗ್ರಾಮದಲ್ಲಿರುವ ನನ್ನ 2.50 ಎಕರೆ ಜಮೀನಿಗೆ ಇ-ಸ್ವತ್ತು ಮಾಡಿಕೊಳ್ಳಲು ಕಷ್ಟವಾಯಿತು. ಪ್ರತಿ ಎಕರೆಗೆ ₹50 ಸಾವಿರ ಲಂಚ ಕೇಳಲಾಯಿತು. ಇದೇ ಪ್ರಕರಣದಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರೂ, ಮುಖ್ಯ ರೂವಾರಿ ತಾಲೂಕು ಪಂಚಾಯಿತಿ ಇಒ ವಿರುದ್ಧ ಯಾವುದೇ ಕ್ರಮವಾಗಿಲ್ಲ’ ಎಂದು ದೂರಿದರು.

‘ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಕಣ್ಣುಮುಚ್ಚಿ ಕುಳಿತಿದ್ದಾರೆಯೇ. ತಾಲ್ಲೂಕು ಪಂಚಾಯಿತಿ ಇ.ಒ. ಶ್ರೀಧರ್ ಮತ್ತು ಆಡಳಿತಾಧಿಕಾರಿ ಗಿರೀಶ್ ಕುಮಾರ್ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ, ಬಂಧಿಸಬೇಕು. ಇಲ್ಲವಾದರೆ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-2025572885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.