ಬಳ್ಳಾರಿ: ನಗರದ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಸುವಿನ ತಲೆ ಪತ್ತೆಯಾದ ಘಟನೆ ಮತ್ತು ಇದೇ ವಿಷಯವನ್ನಿಟ್ಟುಕೊಂಡು ಪಶು ಆಸ್ಪತ್ರೆ ಬಳಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದ್ದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಠಾಣೆಗಳಲ್ಲಿ, ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

11 ಜನರ ಮೇಲೆ ಎಫ್ಐಆರ್: ಹಸುಗಳ ತಲೆ ಪತ್ತೆಯಾದ ಹಿನ್ನೆಲೆ, ಕಳೇಬರ ಪರಿಶೀಲನೆ ಪ್ರಕ್ರಿಯೆ ಮುಗಿದ ನಂತರ ಅವುಗಳನ್ನು ತಮಗೆ ನೀಡಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬ್ರೂಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಯಲ್ ಸರ್ಕಲ್ನಿಂದ ಮೋತಿ ಸರ್ಕಲ್ ಕಡೆಗೆ ಹೋಗುವ ಸ್ಟೇಷನ್ ರಸ್ತೆಯ ಪಶು ಆಸ್ಪತ್ರೆಯ ಬಳಿ ಈ ಘಟನೆ ನಡೆದಿತ್ತು.

‘ಕಾನೂನು ಬಾಹಿರವಾಗಿ ಜಾನುವಾರುಗಳ ತಲೆಗಳನ್ನು ನೀಡಲು ಸಾಧ್ಯವಿಲ್ಲವೆಂದು ತಿಳಿಸಿದರೂ ಪ್ರತಿಭಟನಾಕಾರರು ಯಾವುದೇ ಮುನ್ಸೂಚನೆ ಅಥವಾ ಅನುಮತಿ ಪಡೆಯದೆ ಏಕಾಏಕಿ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಧ್ಯಾಹ್ನ 4.15ರಿಂದ ಸಂಜೆ 5 ಗಂಟೆಯವರೆಗೆ ನಡೆದ ಈ ರಸ್ತೆ ತಡೆಯಿಂದಾಗಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿತ್ತು’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಸಾರ್ವಜನಿಕರಿಗೆ ತೊಂದರೆ ನೀಡಿದ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ನಾಯ್ಡು, ಮೋತ್ಕರ್ ಶ್ರೀನಿವಾಸ, ಗುರಂ ವೆಂಕಟರಮಣ, ಮಾರುತಿ ಪ್ರಸಾದ್, ಅರ್ಜುನ್ ಸಿಂಗ, ಗೋವಿಂದ, ಮಂಜು, ಕೇಶವ, ಸುಗುಣ, ಬಾಗ್ಯಲಕ್ಷ್ಮಿ, ಸೋಮು ಎಂಬುವವರ ವಿರುದ್ಧ ಬಿಎನ್ಎಸ್ ಸೆಕ್ಷನ್ 189(2), 285, 292 ಮತ್ತು 190ರ ಅಡಿಯಲ್ಲಿ ಬ್ರೂಸ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಎಫ್ಐಆರ್: ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಪ್ಪಗಲ್ಲು ರಸ್ತೆಯಲ್ಲಿ ಹಸುಗಳ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿನಗರ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮೇ 28ರಿಂದ ಮೇ 30ರ ಅವಧಿಯಲ್ಲಿ ಯಾರೋ ದುಷ್ಕರ್ಮಿಗಳು ಎರಡು ಜಾನುವಾರುಗಳನ್ನು ಕೊಂದು, ಅವುಗಳ ತಲೆಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹರೀಶ ಕುಮಾರ ಎಂಬುವವರು ನೀಡಿದ ದೂರು ಆಧರಿಸಿ ಗೋಹತ್ಯೆ ನಿಷೇಧ ಕಾಯ್ದೆ– 2020 ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 299ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-1983962491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.