ಬಳ್ಳಾರಿ: ನಗರದ ಕಪ್ಪಗಲ್ಲು ರಸ್ತೆಯ 9ನೇ ಕ್ರಾಸ್ನಲ್ಲಿ ಶನಿವಾರ ಮುಂಜಾನೆ ಹಸುಗಳ ಎರಡು ರುಂಡ ಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಬಂದ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಗೋವುಗಳ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ತಪ್ಪಿತಸ್ಥರನ್ನು ಬಂಧಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ , ಮಾಜಿ ಸಚಿವ ಬಿ. ಶ್ರೀರಾಮುಲು ಭೇಟಿ ನೀಡಿದ್ದರು.

ಮುಂಡಗಳನ್ನು ತಮ್ಮ ಸುಪರ್ದಿಗೆ ನೀಡಬೇಕು, ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಆದರೆ, ಅದಕ್ಕೆ ಅವಕಾಶ ನೀಡದ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ತಾಳೂರು ರಸ್ತೆಯ ರುದ್ರಭೂಮಿಗೆ ಒಯ್ದು ಅಂತ್ಯಕ್ರಿಯೆ ನೆರವೇರಿಸಿದರು.

ಈ ವೇಳೆ ಬಿಜೆಪಿಯವರು ಬೈಕ್ ರ್ಯಾಲಿ ನಡೆಸಿದರು. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-791562636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.