ಬಳ್ಳಾರಿ: ‘ಶಾಸಕ ಈಶ್ವರ್ ಬಿ.ಖಂಡ್ರೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪಂಚಾಕ್ಷರಪ್ಪ ಬಿಚ್ಚಗಲ್ಲು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಭಾಲ್ಕಿ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಶಾಸಕರಾಗಿರುವ ಖಂಡ್ರೆ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವೀರಶೈವ ಲಿಂಗಾಯತ ಮುಖಂಡರಿಗೆ ಮುಂಬರುವ ವಿಧಾನ ಪರಿಷತ್ ಹಾಗೂ ನಿಗಮ ಮಂಡಳಿಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಕನಿಷ್ಠ 10 ರಿಂದ 11 ವೀರಶೈವ ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು’ ಎಂದೂ ಒತ್ತಾಯಿಸಿದರು.

ಮಹಾಸಭಾದ ಗಂಗಾವತಿ ವೀರೇಶ್, ನಂದೀಶ್ ಮಠಂ, ಕೋರಿ ವಿರುಪಾಕ್ಷಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-25-1803410075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.