ಬಳ್ಳಾರಿ: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ ಹಾಗೂ ಪ್ರಗತಿ ಪರಿಶೀಲನಾ ಸಭೆ ನಿಮಿತ್ತ, ಎಲ್ಲಾ ಇಲಾಖಾ ಅಧಿಕಾರಿಗಳು ಪೂರಕ ಅಂಕಿಅಂಶಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಮೇ 18ರಂದು ಆಯೋಗದ ಅಧ್ಯಕ್ಷರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಧಿಕಾರಿಗಳು ಕಳೆದ ಮೂರು ವರ್ಷಗಳ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದ ಪ್ರಗತಿ ಹಾಗೂ ಚಾಲ್ತಿಯಲ್ಲಿರುವ ಕಾಮಗಾರಿಗಳ ನಿಖರ ವಿವರ ಸಿದ್ಧವಾಗಿಟ್ಟುಕೊಳ್ಳಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆಗಾಗಿ ಆನ್ಲೈನ್ ಮೂಲಕವೇ ಅರ್ಜಿ ಆಹ್ವಾನಿಸಬೇಕು’ ಎಂದು ತಿಳಿಸಿದರು.

ಇದೇ ವೇಳೆ ಅನುದಾನ ಬಳಕೆ ಮಾಡದ ನಗರ-ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನೋಟಿಸ್ ನೀಡಲು ನಿರ್ದೇಶಿಸಿದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮಾತನಾಡಿ, ಆಯೋಗದ ಅಧ್ಯಕ್ಷರ ಭೇಟಿ ವೇಳೆ ಸಾರ್ವಜನಿಕರು ಹಾಗೂ ಸಂಘಟನೆಗಳು ಅಹವಾಲು ಸಲ್ಲಿಸಲು ಅವಕಾಶವಿದೆ. ಈ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-104838169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.