ಬಳ್ಳಾರಿ: ಏಪ್ರಿಲ್ 1ರಿಂದ ದೇಶದಾದ್ಯಂತ ಜನಗಣತಿ ಪ್ರಕ್ರಿಯೆ ಆರಂಭವಾಗಿದೆ. ಸದ್ಯ 15ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶವಿದೆ. ಇದರಲ್ಲಿ ಬಳ್ಳಾರಿ ಜಿಲ್ಲೆ (ಬೆಂಗಳೂರು ಮಹಾನಗರವನ್ನು ಹೊರತುಪಡಿಸಿ) ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.

ಜಿಲ್ಲೆಯಲ್ಲಿ ಗಣತಿ ಕಾರ್ಯಕ್ಕೆ ಒಟ್ಟು 2,98,536 ಕುಟುಂಬಗಳನ್ನು ಗುರುತು ಮಾಡಿಕೊಳ್ಳಲಾಗಿದೆ. ಈ ಪೈಕಿ 12,086 ಕುಟುಂಬಗಳು ಸ್ವಯಂ ಗಣತಿಯಲ್ಲಿ ಪಾಲ್ಗೊಂಡಿದ್ದು, ಶೇ 4.05 ಸಾಧನೆಯೊಂದಿಗೆ ಬಳ್ಳಾರಿ ಜಿಲ್ಲೆ ಮುಂಚೂಣಿಯಲ್ಲಿದೆ.

ಮೂರನೇ ಸ್ಥಾನದಲ್ಲಿ ವಿಜಯನಗರ ಜಿಲ್ಲೆ ಇದೆ. ಇಲ್ಲಿ 2,88,406 ಕುಟುಂಬಗಳನ್ನು ಗಣತಿ ಕಾರ್ಯಕ್ಕೆ ಗುರುತು ಮಾಡಲಾಗಿದೆ. ಈ ಪೈಕಿ 9,644 ಕುಟುಂಬಗಳು ಸ್ವಯಂ ಗಣತಿಯಲ್ಲಿ ಪಾಲ್ಗೊಂಡಿವೆ. ಶೇ 3.34ರಷ್ಟು ಸಾಧನೆಯಾಗಿದೆ.

ರಾಜ್ಯದಾದ್ಯಂತ 1,68,57,713 ಕುಟುಂಬಗಳನ್ನು ಜನಗಣತಿ ಕಾರ್ಯಕ್ಕೆ ಗುರುತಿಸಲಾಗಿದ್ದು, ಈ ವರೆಗೆ 2,25,074 ಕುಟುಂಬಗಳು ಸ್ವಯಂಗಣತಿ ಮಾಡಿಕೊಂಡಿವೆ. ರಾಜ್ಯದಾದ್ಯಂತ ಈವರೆಗೆ ಶೇ 1.34ರಷ್ಟು ಮಾತ್ರ ಪ್ರಗತಿ ಕಂಡಿದೆ ಎಂಬುದು ಲಭ್ಯ ಅಂಕಿ ಅಂಶಗಳಿಂದ ಗೊತ್ತಾಗಿದೆ.

‘ಜನಗಣತಿ ಕಾರ್ಯದಲ್ಲಿ ಜನರನ್ನು ಭಾಗಿದಾರರನ್ನಾಗಿ ಮಾಡಿಕೊಳ್ಳಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಸ್ವಯಂ ಗಣತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೂ ತಿಳಿಸಲಾಗಿದೆ. ತಳಮಟ್ಟದ ಸಿಬ್ಬಂದಿ ಕ್ಷೇತ್ರ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅವರೆಲ್ಲರ ಪರಿಶ್ರಮದಿಂದ ಬಳ್ಳಾರಿ ಜಿಲ್ಲೆ ಮೊದಲ ಸ್ಥಾನಕ್ಕೇರಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-25-320407046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.