ಬಳ್ಳಾರಿ: ‘ದೇಶಕ್ಕೆ ಸಂವಿಧಾನ ನೀಡಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ದೇವರನ್ನಾಗಿ ಪೂಜಿಸುವ ಬದಲು, ವಿಶ್ವ ಜ್ಞಾನಿಯಾಗಿ ಕಾಣಬೇಕು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಿನ್ನಸ್ವಾಮಿ ಸೋಸಲೆ ಪ್ರತಿಪಾದಿಸಿದರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಛಲವಾದಿ ನೌಕರರ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್.ಕೆ. ಬಸವರಾಜ ಮಾತನಾಡಿ, ‘ರಾಜ್ಯದ ದಲಿತ ರಾಜಕಾರಣಿಗಳು ಸಮುದಾಯದ ಸಂಘಟನಾ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ. ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ್, ಡಾ.ಎಚ್.ಸಿ. ಮಹಾದೇವಪ್ಪ ಅವರಂತಹ ನಾಯಕರು ಸಮುದಾಯದ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಿದ್ದರೆ ಇಂದು ದಲಿತ ಮುಖ್ಯಮಂತ್ರಿ ಕನಸು ನನಸಾಗುತ್ತಿತ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಖರ್ಗೆ ಅವರು ಮನಸ್ಸು ಮಾಡಿದ್ದರೆ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ಸಿಗುತ್ತಿತ್ತು’ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಆರ್. ಗಂಗಾಧರಯ್ಯ, ಡಿವೈಎಸ್ಪಿ ವಿ. ಗೋವಿಂದರಾಜುಲು, ಸಂಘದ ಅಧ್ಯಕ್ಷ ಗೂಳಪ್ಪ ಬೆಳ್ಳೇಕಟ್ಟೆ ಸೇರಿದಂತೆ ಹಲವರು ಮಾತನಾಡಿದರು. 140ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.

ಹಿರಿಯ ವರದಿಗಾರ ಸಿ. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಹನುಮಪ್ಪ ಸ್ವಾಗತಿಸಿದರು. ಮುಖಂಡರಾದ ನರಸಪ್ಪ, ಡಾ. ಸಿ.ಎಚ್. ಸೋಮನಾಥ್, ಕಮಲರತ್ನ ಬಂತೇಜಿ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-1250501407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.