ಬಳ್ಳಾರಿ: ಮಾದಕ ವ್ಯಸನಿಗಳು ಔಷಧ ದುರುಪಯೋಗ ಪಡಿಸಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್ ಅವರು ನಗರದ ಔಷಧ ಶನಿವಾರ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ, ಎಸ್ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಜತೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಔಷಧ ನಿಯಂತ್ರಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಾದಕ ವ್ಯಸನಿಗಳು ಕೆಲವು ನಿರ್ದಿಷ್ಟ ಔಷಧಗಳನ್ನು ಅಮಲಿಗಾಗಿ ಬಳಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಸತ್ಯನಾರಾಯಣ ಪೇಟೆಯ ಹಲವು ಔಷಧ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿತು.

ಕಟ್ಟುನಿಟ್ಟಿನ ಸೂಚನೆಗಳು: ವೈದ್ಯರು ಅಧಿಕೃತವಾಗಿ ಬರೆದುಕೊಟ್ಟ ಚೀಟಿ (ಪ್ರಿಸ್ಕ್ರಿಪ್ಷನ್) ಇಲ್ಲದೆ ಯಾವುದೇ ಮಾತ್ರೆ ಅಥವಾ ಔಷಧಗಳನ್ನು ಗ್ರಾಹಕರಿಗೆ ನೀಡುವಂತಿಲ್ಲ. ಪ್ರತಿಯೊಂದು ಔಷಧದ ವಹಿವಾಟನ್ನು ಕಂಪ್ಯೂಟರ್ ಹಾಗೂ ರಿಜಿಸ್ಟರ್ ಬುಕ್ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಔಷಧ ನಿಯಂತ್ರಕರು ನೀಡಿರುವ ಮಾರ್ಗಸೂಚಿ ಮತ್ತು ಸೂಚನಾ ಫಲಕಗಳನ್ನು ಅಂಗಡಿಗಳ ಎದುರು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-939832456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.