ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಗೋಡು | 'ಆಮಿಷಕ್ಕೆ ಬಲಿಯಾಗದೇ ಮುಕ್ತವಾಗಿ ಮತದಾನ ಮಾಡಿ'

Published 4 ಮೇ 2024, 15:51 IST
Last Updated 4 ಮೇ 2024, 15:51 IST
ಅಕ್ಷರ ಗಾತ್ರ

ಕುರುಗೋಡು: ತಾಲ್ಲೂಕಿನ ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕಿನ ಕಲ್ಲುಕಂಭ ಗ್ರಾಮದಲ್ಲಿ ಲೊಕಸಭಾ ಚುನಾವಣೆಯ ಮತದಾನ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ವಾರ್ಡ್‍ನಲ್ಲಿ ಸಂಚರಿಸಿ ಜಾಗೃತಿ ಜಾಥಾ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಕೆ.ವಿ.ನಿರ್ಮಲಾ ಮಾತನಾಡಿ, ಐದು ವರ್ಷಗಳಿಗೊಮ್ಮೆ ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಸ್ವಯಂಪ್ರೇರಣೆಯಿಂದ ಭಾಗವಹಿಸಬೇಕು. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮುಕ್ತವಾಗಿ ಭಾಗವಹಿಸಿ ಅರ್ಹ ಅಭ್ಯರ್ಥಿಗೆ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ನಂತರ ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಲಕ್ಷ್ಮಣ್ ನಾಯಕ್ ಮತ್ತು ಸಿಬ್ಬಂದಿ ಮಧುಮೇಹ, ರಕ್ತದೊತ್ತಡ, ಜ್ವರ ಮತ್ತು ಸಾಮಾನ್ಯ ಕಾಯಿಲೆಗಳ ತಪಾಸಣೆ ನಡೆಸಿ ಔಷಧಿವಿತರಣೆ ಮಾಡಿದರು.

ಪಿಡಿಒ ದೇವರಾಜ್ ಮತ್ತು ನರೇಗಾ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT