ಬಳ್ಳಾರಿ: ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ಮಾಡುವ ಪರವಾನಗಿ ಕೋರಿ ಟಾಟಾ ಪವರ್ ಕಂಪನಿ ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಉತ್ಸುಕತೆ ತೋರುತ್ತಿರುವುದನ್ನು ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘ (ಕೆಇಸಿಎ) ತೀವ್ರವಾಗಿ ವಿರೋಧಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾ ಸಂಚಾಲಕ ಆರ್. ಸೋಮಶೇಖರ ಗೌಡ, ‘ವಿದ್ಯುತ್ ವಿತರಣೆಯ ಜವಾಬ್ದಾರಿಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ನೀತಿಯು ಸಾರ್ವಜನಿಕ ಇಂಧನ ವಲಯಕ್ಕೆ ಮಾರಕ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸುವುದರಿಂದ ಪ್ರಸ್ತುತ ಇರುವ ಸರ್ಕಾರಿ ವಿದ್ಯುತ್ ವಿತರಣಾ ಕಂಪನಿಗಳ (ಎಸ್ಕಾಂ) ಆದಾಯದ ಮೂಲ ಗಣನೀಯವಾಗಿ ಕುಸಿಯಲಿದೆ. ಇದು ಕ್ರಮೇಣ ಇಡೀ ಇಂಧನ ವಿತರಣಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಖಾಸಗಿಯವರ ವಶಕ್ಕೆ ಒಪ್ಪಿಸುವ ಹುನ್ನಾರವಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಈ ನೀತಿಯಿಂದಾಗಿ ಭವಿಷ್ಯದಲ್ಲಿ ವಿದ್ಯುತ್ ದರ ದುಬಾರಿಯಾಗಲಿದ್ದು, ಕೃಷಿ ಅವಲಂಬಿತ ರೈತರು, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಹಾಗೂ ಸಾಮಾನ್ಯ ಗ್ರಾಹಕರು ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಸರ್ಕಾರ ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪನಿಗಳಿಗೆ ವಹಿಸುವ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘ ಒತ್ತಾಯಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-1581750558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.