ಬಳ್ಳಾರಿ: ಕರ್ತವ್ಯ ನಿರ್ವಹಿಸುತ್ತಿದ್ದ ಮಹಾನಗರ ಪಾಲಿಕೆಯ ಕಿರಿಯ ಎಂಜಿನಿಯರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಘಟನೆ ನೇತಾಜಿ ನಗರದಲ್ಲಿ ಇತ್ತೀಚೆಗೆ ನಡೆದಿದೆ.

ಪಾಲಿಕೆಯ ಕಿರಿಯ ಎಂಜಿನಿಯರ್ ಪ್ರಕಾಶ್ ಎಂಬುವವರು ಮೇ 21ರಂದು ವಾರ್ಡ್ ಸಂಖ್ಯೆ 39ರಲ್ಲಿ ಸಾರ್ವಜನಿಕ ದೂರಿನ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಪಿ. ಭಾಸ್ಕರ್ ಎಂಬ ವ್ಯಕ್ತಿಯು ಉದ್ದೇಶಪೂರ್ವಕವಾಗಿ ಅವರ ಕೆಲಸಕ್ಕೆ ಅಡ್ಡಿಪಡಿಸಿ, ಸಾರ್ವಜನಿಕವಾಗಿ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ‘ನಿನ್ನ ಸಾಯಿಸುತ್ತೇನೆ’ ಎಂದು ನೇರವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಪ್ರಕಾಶ್ ಅವರು ನೀಡಿದ ದೂರಿನ ಮೇರೆಗೆ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಭಾಸ್ಕರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 132, 352 ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-25-378496770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.