ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಓ) ಬಳ್ಳಾರಿ ಪ್ರಾದೇಶಿಕ ಕಚೇರಿಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಮೇ 13 ರಂದು ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ನಡೆಯಲಿದೆ.

ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಮೇ 10ರೊಳಗಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಸಲ್ಲಿಸಬಹುದು. ಅರ್ಜಿಯಲ್ಲಿ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ ಹಾಗೂ ಕುಂದುಕೊರತೆಯ ವಿವರಗಳನ್ನು ನಮೂದಿಸಬೇಕು. ಲಕೋಟೆಯ ಮೇಲೆ “ಪಿಂಚಣಿ ಅದಾಲತ್” ಎಂದು ಉಲ್ಲೇಖಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ 08392-268943 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ. ಪ್ರವೀಣ್ ತಿಳಿಸಿದ್ದಾರೆ.

ಕುಂದಗೋಳ: ‘ಪಟ್ಟಣದ ಪಂಚಗ್ರಹ ಹಿರೇಮಠದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯರು ಹಾಗೂ ರಂಭಾಪುರಿ ಸ್ವಾಮೀಜಿ ಮೇ 8 ರಂದು ಮಠಕ್ಕೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ’ ಎಂದು ಮಾಜಿ ಶಾಸಕ ಎಂ.ಎಸ್.ಅಕ್ಕಿ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-251969927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.