ಬಳ್ಳಾರಿ: ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರಸಗೊಬ್ಬರ ಖರೀದಿಸುವ ರೈತರಿಗೆ ಬೈಪ್ರಾಡಕ್ಟ್ (ಉಪ ಉತ್ಪನ್ನ)ಗಳನ್ನು ಲಿಂಕ್ ಮಾಡುವುದನ್ನು ಕಡ್ಡಾಯ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಗೊಬ್ಬರ ಮಾರಾಟಗಾರರು ಹಾಗೂ ಫರ್ಟಿಲೈಸರ್ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಕೃಷಿ ಇಲಾಖೆ, ಪೊಲೀಸ್, ಜಿಪಂ ಅಧಿಕಾರಿಗಳು, ಗೊಬ್ಬರ ವ್ಯಾಪಾರಿಗಳು ಹಾಗೂ ಕಂಪನಿ ಪ್ರತಿನಿಧಿಗಳು ಭಾಗವಹಿಸಿದ್ದರು. ರೈತ ಸಂಘದ ಮನವಿಯನ್ನು ಪರಿಗಣಿಸಿದ ಜಿಲ್ಲಾಧಿಕಾರಿಗಳು, ಯೂರಿಯಾ ಮತ್ತು ಡಿಎಪಿ ಗೊಬ್ಬರವನ್ನು ಯಾವುದೇ ಷರತ್ತುಗಳಿಲ್ಲದೆ ನೀಡಬೇಕು ಎಂದು ಸೂಚಿಸಿದರು. ಬೈಪ್ರಾಡಕ್ಟ್ ಖರೀದಿಗೆ ಒತ್ತಾಯಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು ಎಂದು ಸಂಘ ಹೇಳಿದೆ.

ಬಳ್ಳಾರಿ ರೈಲು ನಿಲ್ದಾಣದಲ್ಲಿ ಗೊಬ್ಬರ ದಾಸ್ತಾನು ಇಳಿಕೆಗೆ ಪ್ಲಾಟ್ಫಾರಂ ಕೊರತೆ ಇರುವ ಬಗ್ಗೆ ರೈತ ಸಂಘ ಗಮನ ಸೆಳೆಯಿತು. ಈ ಸಮಸ್ಯೆಯನ್ನು ರೈಲ್ವೆ ಇಲಾಖೆಯೊಂದಿಗೆ ಚರ್ಚಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ರೈತ ಸಂಘ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-25-1460506855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.