ಹೂವಿನಹಡಗಲಿ: ‘ಇತಿಹಾಸ ಚಿಂತಕರು, ಸಂಶೋಧಕರು ಭಾರತ ಸ್ವಾತಂತ್ರ್ಯ ಚಳವಳಿ ನೈಜ ಸಂಗತಿಗಳನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ಅಗತ್ಯವಿದೆ’ ಎಂದು ಇತಿಹಾಸ ತಜ್ಞ, ನಿವೃತ್ತ ಪ್ರಾಧ್ಯಾಪಕ ಬಿ.ಸಿ.ಮಹಾಬಲೇಶ್ವರಪ್ಪ ಹೇಳಿದರು.

ಪಟ್ಟಣದ ಎಸ್ಆರ್ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಬಳ್ಳಾರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಏಕೀಕರಣ ಚಳವಳಿ’ ಕುರಿತು ಎರಡು ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸ್ವಾತಂತ್ರ್ಯ ಚಳವಳಿ ಎಂದರೆ ಕೇವಲ ಬ್ರಿಟೀಷರು, ವಸಾಹತುಶಾಹಿಗಳ ವಿರುದ್ಧದ ಹೋರಾಟವಲ್ಲ. ಭಾರತೀಯ ಸಂಸ್ಕೃತಿಯ ಪುನರುತ್ಥಾನದ ಚಳವಳಿಯಾಗಿದೆ’ ಎಂದರು.

ಕಾರ್ಯಕ್ರಮವನ್ನು ಶಾಸಕ ಕೃಷ್ಣನಾಯ್ಕ ಉದ್ಘಾಟಿಸಿದರು. ‘ಬಳ್ಳಾರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟ’ ಕುರಿತು ಪ್ರಾಧ್ಯಾಪಕ ಡಾ.ಎಚ್.ತಿಪ್ಪೇಸ್ವಾಮಿ ವಿಷಯ ಮಂಡಿಸಿದರು. ನಿವೃತ್ತ ಪ್ರಾಧ್ಯಾಪಕ ಎಂ.ಪಿ.ಎಂ. ದಯಾನಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎಂ. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಕೆ.ಸತೀಶ, ಸಿಡಿಸಿ ಸದಸ್ಯರಾದ ಕೆ.ಅಯ್ಯನಗೌಡ, ಕೆ.ರಾಘವೇಂದ್ರಶೆಟ್ಟಿ, ಎಚ್.ಡಿ.ಜಗ್ಗಿನ, ಉಪನ್ಯಾಸಕರಾದ ಬೂದನೂರು ಸುರೇಶ, ಟಿ.ಜಿ.ಉಮಾದೇವಿ, ಸುನೀತಾದೇವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-1830265190

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.