ಬಳ್ಳಾರಿ: ಕೇಂದ್ರ ಸರ್ಕಾರವು ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ವತಿಯಿಂದ ಬುಧವಾರ ನಗರದ ಹಳೇ ತಾಲ್ಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ಸುಮಾರು ₹7-8 ರಷ್ಟು ಏರಿಸಿರುವುದು ಜನಸಾಮಾನ್ಯರ ಮೇಲೆ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯೆ ಡಿ. ನಾಗಲಕ್ಷ್ಮಿ ಅವರು, ‘ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿ ಹಣದುಬ್ಬರ ಉಂಟಾಗುತ್ತಿದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವಿದ್ದರೂ, ಕೇಂದ್ರದ ಬಿಜೆಪಿ ಸರ್ಕಾರವು ಅಮೆರಿಕದ ಒತ್ತಡಕ್ಕೆ ಮಣಿದು ಆ ಅವಕಾಶವನ್ನು ಕೈಚೆಲ್ಲಿದೆ. ಪೆಟ್ರೋಲ್ ಬೆಲೆಯಲ್ಲಿ ಅರ್ಧದಷ್ಟು ತೆರಿಗೆಗಳೇ ಇವೆ’ ಎಂದು ಅವರು ದೂರಿದರು.

ಜಿಲ್ಲಾ ಸಮಿತಿ ಸದಸ್ಯ ಆರ್. ಸೋಮಶೇಖರ ಗೌಡ ಮಾತನಾಡಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆಯಾದರೂ ಅದರ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ. ಕಾಂಗ್ರೆಸ್ ಹಾದಿಯಲ್ಲೇ ಬಿಜೆಪಿ ಸಾಗುತ್ತಿದ್ದು. ಎರಡೂ ಪಕ್ಷಗಳು ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಆಗಿ ಕೆಲಸ ಮಾಡುತ್ತಿವೆ’ ಎಂದು ಟೀಕಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಬೇಕು.ತೈಲ ಕಂಪನಿಗಳ ಲಾಭಕ್ಕಾಗಿ ಅನುಸರಿಸುತ್ತಿರುವ ಜಾಗತಿಕ ದರ ನಿಗದಿ ನೀತಿಯನ್ನು ಕೈಬಿಡಬೇಕು. ಯುದ್ಧ ನಿಲ್ಲಿಸುವಂತೆ ಅಮೆರಿಕದ ಮೇಲೆ ಭಾರತ ಒತ್ತಡ ಹೇರಬೇಕು ಎಂದು ಪ್ರತಿಭಟನೆ ವೇಳೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಡಾ. ಪ್ರಮೋದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಟನೆಯಲ್ಲಿ ಮಂಜುಳಾ, ಎ. ದೇವದಾಸ್, ಶಾಂತಾ, ಗೋವಿಂದ್, ಈಶ್ವರಿ, ನಿವೃತ್ತ ಉಪನ್ಯಾಸಕ ನರಸಣ್ಣ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-69313008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.