ಬಳ್ಳಾರಿ: ರಾಜ್ಯ ಸರ್ಕಾರ ತಕ್ಷಣವೇ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕೆಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಸಂಚಾಲಕ ಜಗದೀಶ್ ನೇಮಕಲ್ ಮಾತನಾಡಿ, ‘ನಿರಂತರವಾಗಿ ಮನವಿ ಪತ್ರ ಸಲ್ಲಿಸಿ, ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುತ್ತಾ ಕಾಲಹರಣ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರದ ವಿಳಂಬ ಧೋರಣೆಯಿಂದ ನಿರಾಸೆ ಹೆಚ್ಚುತ್ತಿದೆ. ಶೀಘ್ರವೇ ನೇಮಕಾತಿ ಆರಂಭಿಸಲಾಗುವುದೆಂದು ಸರ್ಕಾರ ಹೇಳುತ್ತಿದೆಯಾದರೂ, ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ನಾಗರಿಕ ಸೇವಾ ಸುಧಾರಣೆಗಳಿಗೆ ಸಂಬಂಧಿಸಿದ ಪಿ.ಸಿ. ಹೋಟ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು. ಕೆಪಿಎಸ್ಸಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿದರು.

ಪಂಪಾಪತಿ, ಗಾದಿಲಿಂಗ ವೆಂಕಟೇಶ್, ದಾದು, ಬಸವರಾಜ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-1149320082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.