ಬಳ್ಳಾರಿ: ಬಳ್ಳಾರಿ ನಗರದಲ್ಲಿ ಕಬಳಿಕೆಯಾಗಿರುವ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ಜಿಲ್ಲಾಡಳಿತದ ಕಾರ್ಯಾಚರಣೆ ಶನಿವಾರ ಮತ್ತೆ ಆರಂಭವಾಯಿತು. ಬಳ್ಳಾರಿ ಗ್ರಾಮಾಂತರದ ವಿವಿಧ ಸರ್ವೆ ಸಂಖ್ಯೆಗಳಲ್ಲಿನ ಒಟ್ಟು 15.05 ಎಕರೆ ಜಮೀನನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಯಿತು.

ಸರ್ಕಾರದ ಜಾಗ ಎಂದು ಗುರುತಿಸಲಾಗಿದ್ದ ಕೊಳಗಲ್ ಸಮೀಪದ ಸರ್ವೆ ಸಂಖ್ಯೆ 977ರ 9.20 ಎಕರೆ, ಸರ್ವೆ ಸಂಖ್ಯೆ 976ರ 4.72 ಎಕರೆ ಮತ್ತು ಬಳ್ಳಾರಿ ನಗರ ಹೊರ ವಲಯದ ರೂಪನಗುಡಿ ರಸ್ತೆಯ ಸರ್ವೆ ಸಂಖ್ಯೆ 813ರ 1.13 ಎಕರೆ ಸೇರಿದಂತೆ ಒಟ್ಟು 15.05 ಎಕರೆ ಜಮೀನುಗಳನ್ನು ಅಧಿಕೃತವಾಗಿ ಜಿಲ್ಲಾಡಳಿತದ ಸುಪರ್ದಿಗೆ ಪಡೆಯಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ ನೇತೃತ್ವದ ಅಧಿಕಾರಿಗಳ ತಂಡ ಬೆಳಿಗ್ಗೆ 6 ಗಂಟೆಗೆ ಮೊದಲಿಗೆ ರೂಪನ ಗುಡಿ ರಸ್ತೆಯಲ್ಲಿ ಕಾರ್ಯಾಚರಣೆ ಆರಂಭಿಸಿತು. ಬಳಿಕ ಕೊಳಗಲ್ ಸಮೀಪದ ಭೂಮಿ ಸ್ವಾಧೀನಕ್ಕೆ ತೆಗೆದುಕೊಂಡಿತು.

ರೂಪನಗುಡಿ ರಸ್ತೆಯಲ್ಲಿ ವಶಕ್ಕೆ ಪಡೆಯಲಾದ 1.13 ಎಕರೆ ಜಮೀನಿನಲ್ಲಿ ಅಂಗನವಾಡಿ ನಿರ್ಮಿಸಲು ನಿರ್ಧರಿಸಲಾಗಿತ್ತು. ಆದರೆ, ಭೂ ಒತ್ತುವರಿ ಮಾಡಿದ್ದ ಪಟ್ಟಭದ್ರರು ಅದಕ್ಕೆ ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅಂಗನವಾಡಿಯನ್ನು ಬೇರೆಡೆ ನಿರ್ಮಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇನ್ನು ಕೊಳಗಲ್ ಬಳಿಯ ಭೂಮಿಯನ್ನು ರೈತರು ಕೃಷಿ ಚಟುವಟಿಕೆಗಳಿಗಾಗಿ ಬಳಕೆ ಮಾಡಿಕೊಂಡಿದ್ದರು. ಸದ್ಯ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ‘ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ಸಿ–ವಿಮ್ಸ್)’ದ ಘಟಕವೊಂದರ ನಿರ್ಮಾಣಕ್ಕೆ, ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರ ನಿವಾಸ ಮತ್ತು ಕಂದಾಯ ಇಲಾಖೆಯ ವಸತಿ ಗೃಹಗಳ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎನ್ನಲಾಗಿದೆ.

ಬಳ್ಳಾರಿ ನಗರದ ಕಬರಸ್ತಾನ ಜಮೀನಿನ ಹಕ್ಕು ಬದಲಾವಣೆ ನಂತರ ನಗರದಲ್ಲಿರುವ ಸರ್ಕಾರಿ ಆಸ್ತಿ ರಕ್ಷಣೆಗೆ ಕೂಗೆದ್ದಿತ್ತು. ಇದೇ ವಿಚಾರ ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಪ್ರತಿಧ್ವನಿಸಿತ್ತು. ಜಿಲ್ಲಾಡಳಿತ ಕೂಡಲೇ ಸಮಿತಿಯೊಂದನ್ನು ರಚನೆ ಮಾಡಿ, ಎಲ್ಲೆಲ್ಲಿ ಭೂಮಿ ಕಬಳಿಕೆಯಾಗಿದೆ ಎಂಬುದನ್ನು ಪತ್ತೆ ಮಾಡಿ, ಅದನ್ನು ಸುಪರ್ದಿಗೆ ಪಡೆಯಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು.

ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಸರ್ಕಾರಿ ಜಮೀನುಗಳ ರಕ್ಷಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮದ್ ಝುಬೇರ ನೇತೃತ್ವದಲ್ಲಿ ಜಿಲ್ಲಾಡಳಿತ ಸಮಿತಿ ರಚಿಸಿತ್ತು. ಈ ಸಮಿತಿ ಈಗಾಗಲೇ ಹಲವು ಹಂತದ ಕಾರ್ಯಾಚರಣೆ ನಡೆಸಿದ್ದು, ಹತ್ತಾರು ಎಕರೆ ಭೂಮಿಯನ್ನು ಸುಪರ್ದಿಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಶನಿವಾರದ ತೆರವು ಕಾರ್ಯಾಚರಣೆ ಬಳ್ಳಾರಿ ಉಪ ವಿಭಾಗಾಧಿಕಾರಿ ರಾಜೇಶ್ ಎಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರ್ ಟಿ.ರೇಖಾ ಸೇರಿದಂತೆ ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-1638473010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.