ಬಳ್ಳಾರಿ: ‘ಜಿಲ್ಲೆಯ ಆರೋಗ್ಯ ಸುಧಾರಣೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವೈದ್ಯಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಯಿ-ಶಿಶು ಆರೋಗ್ಯಕ್ಕೆ ಒತ್ತು: ಗರ್ಭಿಣಿಯರನ್ನು ಮೊದಲ ಮೂರು ತಿಂಗಳಲ್ಲೇ ಕಡ್ಡಾಯವಾಗಿ ನೋಂದಣಿ ಮಾಡಿಸಿ, ನಿಯಮಿತ ತಪಾಸಣೆ ಮೂಲಕ ರಕ್ತಹೀನತೆ ಪತ್ತೆಹಚ್ಚಬೇಕು. ಸಮುದಾಯ, ಪ್ರಾಥಮಿಕ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸುರಕ್ಷಿತ ಹೆರಿಗೆಗಳಿಗೆ ಆದ್ಯತೆ ನೀಡಿ ತಾಯಿ-ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ತಾಯಿ ಕಾರ್ಡ್ಗಳಲ್ಲಿ ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ತಿಳಿಸಿದರು.

ಎಚ್ಪಿವಿ ಲಸಿಕೆ ಅಭಿಯಾನ: ಜಿಲ್ಲೆಯಲ್ಲಿ ಎಚ್ಪಿವಿ ಲಸಿಕೆ ಪ್ರಗತಿ ಕುಂಠಿತವಾಗಿದೆ. 14 ವರ್ಷದ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲು ಪೋಷಕರು ಹಾಗೂ ಶಿಕ್ಷಕರಲ್ಲಿ ಜಾಗೃತಿ ಮೂಡಿಸಬೇಕು. ಸ್ಥಳೀಯ ಮುಖಂಡರ ಸಹಕಾರದಿಂದ ಸಮುದಾಯ ಸಭೆಗಳನ್ನು ನಡೆಸಬೇಕು ಎಂದು ಸಿಇಒ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಮಾತನಾಡಿ, ‘ಆಶಾ ಕಾರ್ಯಕರ್ತೆಯರು ಗರ್ಭಿಣಿಯರ ಮನೆಗೆ ಭೇಟಿ ನೀಡಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕು. ಬೇಸಿಗೆ ಹಿನ್ನೆಲೆ ಶಾಖಾಘಾತ ಚಿಕಿತ್ಸೆಗಾಗಿ ಸಿದ್ಧತೆ ಮಾಡಿಕೊಂಡು, ನಾಯಿ ಹಾಗೂ ಹಾವು ಕಡಿತ ಕುರಿತು ಜಾಗೃತಿ ಮೂಡಿಸುವಂತೆ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಯೋಜನಾ ಅಭಿವೃದ್ದಿ ಅಧಿಕಾರಿ ಡಾ. ಆರ್. ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-25-1150897407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.