ಬಳ್ಳಾರಿ: ‘ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಿಸಿಲಿನ ಶಾಖಾಘಾತದಿಂದ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಹೇಳಿದರು.

ಸಿರುಗುಪ್ಪ ತಾಲ್ಲೂಕಿನ ಚಿಕ್ಕ ಬಳ್ಳಾರಿ ಗ್ರಾಮಕ್ಕೆ ಈಚೆಗೆ ಭೇಟಿ ನೀಡಿದ ಅವರು, ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಬಿಸಿಲಿನ ತೀವ್ರತೆಯಿಂದ ರಕ್ಷಣೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸಿದರು.

‘ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು. ಹೊರಗೆ ಹೋಗುವ ಸಂದರ್ಭಗಳಲ್ಲಿ ಛತ್ರಿ ಬಳಸಿ, ಕುಡಿಯುವ ನೀರನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಕು. ಮಕ್ಕಳ ತಲೆಗೆ ಒದ್ದೆಯಾದ ಬಟ್ಟೆ ಮುಚ್ಚುವುದು ಸೂಕ್ತ’ ಎಂದು ಹೇಳಿದರು.

‘ಬಿಸಿಲಿನ ಪರಿಣಾಮವಾಗಿ ತಲೆನೋವು, ತಲೆಸುತ್ತು, ಒಣಚರ್ಮ, ಸ್ನಾಯು ಸೆಳೆತ, ವಾಂತಿ ಲಕ್ಷಣಗಳು ಕಾಣಿಸಬಹುದು. ಆಹಾರ ತ್ಯಜಿಸುವುದು, ಮೂತ್ರ ಕಡಿಮೆಯಾಗುವುದು, ಆಲಸ್ಯ ಇತ್ಯಾದಿ ಲಕ್ಷಣಗಳು ಮಕ್ಕಳಲ್ಲಿ ಕಂಡುಬರುತ್ತವೆ. ಇಂಥ ಸಂದರ್ಭದಲ್ಲಿ ತಣ್ಣೀರಿನಿಂದ ದೇಹ ತಂಪುಗೊಳಿಸಬೇಕು. ಕೂಡಲೇ, ವೈದ್ಯರನ್ನು ಸಂಪರ್ಕಿಸಬೇಕು’ ಎಂದು ಸಲಹೆ ನೀಡಿದರು.

‘ಬಾಯಾರಿಕೆ ಇಲ್ಲದಿದ್ದರೂ ಆಗಾಗ್ಗೆ ನೀರು ಕುಡಿಯಬೇಕು. ಮಜ್ಜಿಗೆ, ಲಿಂಬೆ ಶರಬತ್ತು, ಎಳನೀರು, ಹಣ್ಣಿನ ರಸಗಳನ್ನು ಸೇವಿಸುವುದು ಉತ್ತಮ. ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಿ, ಹೊರಾಂಗಣ ಕೆಲಸಗಳನ್ನು ಬೆಳಿಗ್ಗೆಯೇ ಪೂರ್ಣಗೊಳಿಸಬೇಕು’ ಎಂದು ತಿಳಿಸಿದರು.

‘ಮದ್ಯಪಾನ, ಕಾಫಿ, ಟೀ ಹಾಗೂ ಹೆಚ್ಚು ಸಕ್ಕರೆ ಇರುವ ಪಾನೀಯಗಳ ಸೇವನೆ ಬೇಡ. ರಸ್ತೆ ಬದಿ ಹಣ್ಣುಗಳು ಮತ್ತು ಅಶುದ್ಧ ನೀರನ್ನು ಸೇವಿಸಬಾರದು. ಒಆರ್ಎಸ್ ಜೀವಜಲ ಬಳಕೆ ಆರೋಗ್ಯಕ್ಕೆ ಸಹಾಯಕವಾಗಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಒಆರ್ಎಸ್ ಮತ್ತು ಅಗತ್ಯ ಔಷಧಗಳನ್ನು ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-259557130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.