ಬಳ್ಳಾರಿ: ರಸ್ತೆ ಅಪಘಾತ ತಡೆಗಟ್ಟುವ ಹಾಗೂ ವಾಹನ ಸವಾರರಲ್ಲಿ ಸುರಕ್ಷತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎಂಜಿಆರ್ ಟ್ರಸ್ಟ್ ವತಿಯಿಂದ ನಗರದ ರೇಡಿಯೋ ಪಾರ್ಕ್ ಸಮೀಪ ಶುಕ್ರವಾರ ಹೆಲ್ಮೆಟ್ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪೊಲೀಸ್ ಇಲಾಖೆ ಜೂನ್ 1ರಿಂದ ಜಿಲ್ಲೆಯಾದ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿರುವ ಪ್ರಯುಕ್ತ ‘ಸುರಕ್ಷಿತ ಪಯಣ–ಹೆಲ್ಮೆಟ್ ಕಡ್ಡಾಯ’ ಎಂಬ ಘೋಷಣೆಯೊಂದಿಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ‘ಜೀವ ರಕ್ಷಣೆಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು’ ಎಂದರು.

ರಸ್ತೆ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹೆಲ್ಮೆಟ್ ಉಚಿತ ವಿತರಣೆ ನಡೆಸಿರುವುದು ಶ್ಲಾಘನೀಯ. ಇಂತಹ ಸೇವಾ ಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಕಲ್ಯಾಣ ಸ್ವಾಮೀಜಿ ಹೇಳಿದರು.

ಈ ವೇಳೆ ಅಂದಾಜು ಸಾವಿರಕ್ಕೂ ಹೆಚ್ಚು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹೆನ್ರಿ ಡಿಸೋಜಾ, ಮಾಜಿ ಶಾಸಕ ಸುರೇಶ್ ಬಾಬು, ಮಹಾನಗರ ಪಾಲಿಕೆ ಸದಸ್ಯ ಎಂ. ಗೋವಿಂದರಾಜುಲು, ವೀರೇಶ್ ಚೌಹಾನ್, ಡಾ.ರವಿಶಂಕರ್ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-428698569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.