ಬಳ್ಳಾರಿ: ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರ ಪರಿಶೀಲನಾ ಕಾರ್ಯವನ್ನು ಜಿಲ್ಲಾ ಪೊಲೀಸರು ಮಂಗಳವಾರವೂ ಮುಂದುವರಿಸಿದ್ದು, ಒಂದೇ ದಿನದಲ್ಲಿ ಒಟ್ಟು 472 ಪ್ರಕರಣಗಳನ್ನು ದಾಖಲಿಸಲಾಗಿದೆ.

ಎಲ್ಲ ಪ್ರಕರಣಗಳಿಂದ ₹2,36,000 ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ತಿಳಿಸಿದ್ದಾರೆ.

ಬಳ್ಳಾರಿ ನಗರ ಉಪ ವಿಭಾಗದಲ್ಲಿ 185 ಪ್ರಕರಣಗಳು ದಾಖಲಾಗಿದ್ದು, ₹92,500 ದಂಡ ವಸೂಲಿ ಮಾಡಲಾಗಿದೆ. ಸಿರುಗುಪ್ಪ ಉಪ ವಿಭಾಗದಲ್ಲಿ 162 ಪ್ರಕರಣಗಳಿಂದ ₹81,000, ತೋರಣಗಲ್ಲು ಉಪ ವಿಭಾಗದಲ್ಲಿ 125 ಪ್ರಕರಣಗಳನ್ನು ದಾಖಲಿಸಿ, ₹62,500 ದಂಡ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದ್ವಿಚಕ್ರ ವಾಹನ ಸವಾರರು ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಮತ್ತು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-25-104655402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.