ಬಳ್ಳಾರಿ: ಬಳ್ಳಾರಿ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಇಂದಿನಿಂದ ಹೆಲ್ಮೆಟ್ ಕಡ್ಡಾಯವಾಗಿದ್ದು, ಇದರ ಸಮರ್ಪಕ ಜಾರಿಗೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ಹೆಲ್ಮೆಟ್ ಕಡ್ಡಾಯದ ಕುರಿತು ಪೊಲೀಸ್ ಇಲಾಖೆ ಒಂದು ತಿಂಗಳ ಹಿಂದೆಯೇ ಪ್ರಕಟಣೆ ಹೊರಡಿಸಿತ್ತು. ಹೆಲ್ಮೆಟ್ ಧರಿಸುವ ಅಗತ್ಯದ ಬಗ್ಗೆ ಈಗಾಗಲೇ ಇಲಾಖೆಯು ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ. ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಬೈಕ್ ರ್ಯಾಲಿ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದೆ. ‘ವಾಹನ ಸವಾರರು ಐಎಸ್ಐ (ಐಎಸ್ಐ) ಮಾರ್ಕ್ವುಳ್ಳ ಹೆಲ್ಮೆಟ್ಗಳನ್ನೇ ಬಳಸಬೇಕು’ ಎಂದು ಜನರಿಗೆ ಮನವರಿಕೆ ಮಾಡುವ ಪ್ರಯತ್ನಗಳು ನಡೆದಿವೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ, ‘ಜೂನ್ 1ರಿಂದ 15 ದಿನಗಳ ವರೆಗೆ ಸಣ್ಣ ರಿಯಾಯಿತಿ ಇರಲಿದೆ. ಆರಂಭದಲ್ಲಿ ದಂಡ ವಿಧಿಸದೆ, ಹೆಲ್ಮೆಟ್ ಖರೀದಿಸುವಂತೆ ತಿಳಿಹೇಳಲಾಗುತ್ತದೆ. ತಕ್ಷಣವೇ ಹೆಲ್ಮೆಟ್ ಖರೀದಿಸಿ ತಂದರೆ ದಂಡ ವಿಧಿಸದಿರಲು ನಿರ್ಧರಿಸಲಾಗಿದೆ. ಆ ನಂತರ ನಿಯಮ ಉಲ್ಲಂಘಿಸುವವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ’ ಎಂದು ತಿಳಿಸಿದ್ದರು.

ಹಿಂದೆಯೂ ಕಡ್ಡಾಯವಾಗಿತ್ತು: ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಪೊಲೀಸ್ ಇಲಾಖೆ ಕಳೆದ ವರ್ಷ ಮೇ ತಿಂಗಳಲ್ಲೂ ಆದೇಶಿಸಿತ್ತು. ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿಯೂ ತಿಳಿಸಿತ್ತು. ಆದರೆ, ಸಾರ್ವಜನಿಕರಿಂದ ನಿಯಮ ಪಾಲನೆಯಾಗಿರಲಿಲ್ಲ.

ಬಳ್ಳಾರಿಯಲ್ಲಿ ಅಪಘಾತಗಳ ವಿವರ: ಕಳೆದ ಮೂರು ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 1,009 ದ್ವಿಚಕ್ರ ವಾಹನ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ 1,079 ಜನರು ಗಾಯಗೊಂಡಿದ್ದು, 452 ಸವಾರರು ಮೃತಪಟ್ಟಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-193874363

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.