ಬಳ್ಳಾರಿ: ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ, ವಿತರಣೆ ಹಾಗೂ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಾನೂನು ಎಂಬುದು ಸಾರ್ವಜನಿಕರ ಹಿತರಕ್ಷಣೆಗಾಗಿ ನಾವೇ ಮಾಡಿಕೊಂಡಿರುವುದು. ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡುವಂತೆ ಯಾರೂ ಮನವಿ ಮಾಡಬಾರದು. ವಿನಾಯಿತಿ ಕೋರುವುದು ಎಂದರೆ ನಿಮ್ಮ ಕುಟುಂಬದ ಬಗ್ಗೆ ಕಾಳಜಿ ಇಲ್ಲ ಎಂದರ್ಥ’ ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮಾತನಾಡಿ, ‘ಕಳೆದ ಮೂರು ವರ್ಷಗಳಲ್ಲಿ (2023 ರಿಂದ ಏಪ್ರಿಲ್ 2026ರ ವರೆಗೆ) ಜಿಲ್ಲೆಯಲ್ಲಿ ಬೈಕ್ ಅಪಘಾತಗಳಿಂದ 462 ಮಂದಿ ಮೃತಪಟ್ಟಿದ್ದಾರೆ. ಅಂದರೆ ಸರಾಸರಿ ಪ್ರತಿ ಎರಡು ದಿನಕ್ಕೆ ಒಬ್ಬರು ಜೀವ ಕಳೆದುಕೊಳ್ಳುತ್ತಿದ್ದಾರೆ. ಹೆಲ್ಮೆಟ್ ನಮ್ಮ ಪ್ರಾಣ ರಕ್ಷಣೆಯ ಸಣ್ಣ ಹೂಡಿಕೆಯಾಗಿದೆ’ ಎಂದು ಅಂಕಿ ಅಂಶಗಳೊಂದಿಗೆ ವಿವರಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ ಮಾತನಾಡಿ, ‘ಬೆಲೆಬಾಳುವ ಮೊಬೈಲ್ ಫೋನ್ಗೆ ಸ್ಕ್ರೀನ್ ಗಾರ್ಡ್ ಹಾಕುವ ನಾವು, ಅದಕ್ಕಿಂತಲೂ ಅಮೂಲ್ಯವಾದ ಮೆದುಳಿನ ರಕ್ಷಣೆಗೆ ಹೆಲ್ಮೆಟ್ ಧರಿಸಲು ನಿರ್ಲಕ್ಷ್ಯ ಮಾಡುತ್ತಿದ್ದೇವೆ. ಬರುವ ಜೂನ್ 1ರಿಂದ ಜಿಲ್ಲೆಯಾದ್ಯಂತ ಹೆಲ್ಮೆಟ್ ಕಡ್ಡಾಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ‘ಬಿಸಿಲು ಅಥವಾ ಅಸ್ವಸ್ಥತೆಯ ನೆಪವೊಡ್ಡಿ ಹೆಲ್ಮೆಟ್ ಧರಿಸುವುದನ್ನು ಕಡೆಗಣಿಸಬಾರದು. ಕ್ಷಣಿಕ ಅನಾನುಕೂಲಕ್ಕಿಂತ ಪ್ರಾಣ ರಕ್ಷಣೆ ಮುಖ್ಯ’ ಎಂದು ಸವಾರರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಗಣ್ಯರು ‘ಹೆಲ್ಮೆಟ್ ಧರಿಸಿ-ಜೀವ ಉಳಿಸಿ’ ಭಿತ್ತಿಪತ್ರಗಳನ್ನು ಅನಾವರಣಗೊಳಿಸಿದರು. ಬಳಿಕ ಸಾರ್ವಜನಿಕರು ಮತ್ತು ಪೌರಕಾರ್ಮಿಕರಿಗೆ 100 ಹೆಲ್ಮೆಟ್ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-25-1172976140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.