ಬಳ್ಳಾರಿ: ಶತಮಾನಗಳ ಇತಿಹಾಸವಿರುವ ಭಾರತದ ಜ್ಞಾನ ಪರಂಪರೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ‘ಜ್ಞಾನ ಭಾರತಂ ಮಿಷನ್’ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಯೋಜನೆಯಡಿ ಜಿಲ್ಲೆಯಾದ್ಯಂತ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು ‘ರಾಷ್ಟ್ರೀಯ ಹಸ್ತಪ್ರತಿ ಭಂಡಾರ’ ನಿರ್ಮಿಸುವುದು ಈ ಮಿಷನ್ನ ಮುಖ್ಯ ಉದ್ದೇಶ. ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಇದರ ನೋಡೆಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಜಿಲ್ಲೆಯ ಮಠಗಳು, ದೇವಾಲಯಗಳು, ಗ್ರಂಥಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಪತ್ತೆಹಚ್ಚುವ ಜವಾಬ್ದಾರಿ ಹೊತ್ತಿದೆ. ಸಮೀಕ್ಷೆಯು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದ್ದು, ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಮತ್ತು ಮೆಟಾಡೇಟಾ ದಾಖಲೀಕರಣ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವು ವೇಗವಾಗಿ ನಡೆಯುತ್ತಿದ್ದು, 17 ಜಿಲ್ಲೆಗಳಲ್ಲಿ ಏ.27ರ ವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿ ಸಂಗ್ರಹಿಸಲಾಗಿದೆ. ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿಯೂ ಸಮೀಕ್ಷಾ ಕಾರ್ಯವು ಪ್ರಗತಿಯಲ್ಲಿದೆ. ಈ ಸಮೀಕ್ಷಾ ಪ್ರಕ್ರಿಯೆಯು ಮೇ ಅಂತ್ಯದವರೆಗೆ ಮುಂದುವರಿಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-69576377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.