ಕಂಪ್ಲಿ: ‘ಅಲೆಮಾರಿ ಕುಟುಂಬಗಳು ಶಾಶ್ವತವಾಗಿ ನೆಲೆ ನಿಲ್ಲಲು ಭೂಮಿ, ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು’ ಎಂದು ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿ ರಾಜ್ಯ ಉಪಾಧ್ಯಕ್ಷ ವೈ. ಶಿವಕುಮಾರ ತಿಳಿಸಿದರು.

ಇಲ್ಲಿನ ಅಲೆಮಾರಿ ಸಿಂಧೂಳ್ಳು ಸಮುದಾಯ ಕಾಲೊನಿಗೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 2,500 ಸೇರಿದಂತೆ ರಾಜ್ಯದಲ್ಲಿ 75 ಸಾವಿರ ಅಲೆಮಾರಿ ಕುಟುಂಬಗಳಿದ್ದು, ಅಂದಾಜು 20 ಸಾವಿರ ಕುಟುಂಬಗಳಿಗೆ ತಾಡಪಲು ವಿತರಿಸಲಾಗಿದೆ’ ಎಂದು ತಿಳಿಸಿದರು.

ರಾಜ್ಯ ಅಲೆಮಾರಿ ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಪಿ. ಶಿಕಾರಿ ರಾಮು ಮಾತನಾಡಿ, ‘ಅಲೆಮಾರಿಗಳಿಗೆ ಕನಿಷ್ಠ ಒಂದು ಎಕರೆ ಭೂಮುಯಲ್ಲಿ ವಸತಿ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಗೊಂದು ಅಲೆಮಾರಿ ವಸತಿ ಶಾಲೆ ಆರಂಭಿಸಬೇಕು. ತಾಲ್ಲೂಕಿಗೊಂದು ಅಲೆಮಾರಿ ಸಮುದಾಯ ಭವನ ನಿರ್ಮಿಸಬೇಕು. ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ಒದಗಿಸಬೇಕು’ ಎಂದು ಮನವಿ ಸಲ್ಲಿಸಿದರು.

ಸಿಂಧೂಳ್ಳು ಸಮಾಜದ ರಾಜ್ಯ ಗೌರವಾಧ್ಯಕ್ಷ ರಾವುಲ್ ನಾಗಪ್ಪ, ತಾಲ್ಲೂಕು ಸುಡುಗಾಡು ಸಿದ್ಧರ ಸಮಾಜದ ಅಧ್ಯಕ್ಷ ಸಣ್ಣ ಹುಲುಗಪ್ಪ, ಮೇದಾ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ. ಗಾಳಿಕುಮಾರ್, ಹಕ್ಕಿಪಿಕ್ಕಿ ಅಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷ ಜೆ. ಬಾಬು, ಪ್ರಮುಖರಾದ ಯಲ್ಲಮ್ಮ, ದುರುಗಮ್ಮ, ನಾಗಮ್ಮ, ಮಾರೆಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-508970630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.