ಬಳ್ಳಾರಿ: ಜಿಲ್ಲೆಯಲ್ಲಿ 14 ವರ್ಷದ ಹೆಣ್ಣು ಮಕ್ಕಳಿಗೆ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡುವ ಅಭಿಯಾನ ಮುಂದುವರಿದಿದ್ದು, ಇದುವರೆಗೆ 2,591 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ ಹನುಮಂತಪ್ಪ ತಿಳಿಸಿದ್ದಾರೆ.

‘ಒಟ್ಟು 16,495 ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ. ಈ ವರೆಗೆ ಲಸಿಕೆ ಪಡೆದವರಿಲ್ಲಿ ಯಾರಿಗೂ, ಯಾವುದೇ ಅಡ್ಡ ಪರಿಣಾಮ ಕಂಡುಬಂದಿಲ್ಲ. ಸಾಮಾಜಿಕ ಜಾಲತಾಣಗಳ ತಪ್ಪು ಮಾಹಿತಿಗೆ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ.

‘ಮಾರ್ಚ್ 11ರಿಂದ ಆರಂಭವಾದ ಈ ಅಭಿಯಾನ 90 ದಿನ ನಡೆಯಲಿದೆ. ಗರ್ಭಕಂಠದ ಕ್ಯಾನ್ಸರ್ ತಡೆಯಲು ಲಸಿಕೆ ಸಹಕಾರಿ ಆಗಿದ್ದು, ಪಾಲಕರು ಮಕ್ಕಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಲಸಿಕೆ ಹಾಕಿಸಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಮೇಶ್ ಬಾಬು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-25-1251764403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.