ಬಳ್ಳಾರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಇತ್ತೀಚೆಗೆ ನಡೆಸಿರುವ ದಾಳಿಗಳಲ್ಲಿ 123 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆಯಾಗಿದೆ. ಮಟ್ಕಾ ಅಡ್ಡೆಯ ಮೇಲೆ ನಡೆದ ದಾಳಿಯಲ್ಲಿ ₹19.44 ಲಕ್ಷ ವಶಪಡಿಸಿಕೊಳ್ಳಲಾಗಿದೆ.

ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಪಿ.ಆರ್. ಲೇಔಟ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 40.80 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಮಾರ್ಚ್ 26ರಂದು ಜಂಟಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ₹93,840 ಆಗಿದ್ದು, ಶರಭಯ್ಯ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ಠಾಣಾ ವ್ಯಾಪ್ತಿಯ ಕೊಳಗಲ್ಲು–ಸಿರುಗುಪ್ಪ ರಸ್ತೆಯಲ್ಲಿ ಮಾರ್ಚ್ 29ರಂದು ಮತ್ತೊಂದು ದಾಳಿ ನಡೆಸಲಾಗಿದ್ದು, ₹1.90 ಲಕ್ಷ ಮೌಲ್ಯದ 82.80 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಮಟ್ಕಾ ಅಡ್ಡೆ ಮೇಲೆ ದಾಳಿ: ಎ.ಪಿ.ಎಂ.ಸಿ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ₹19.44 ಲಕ್ಷ ನಗದು, ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿ.ವಿ. ರಾಮಾಂಜಿನೇಯಲು, ಜನ್ನೆ ಲಕ್ಷ್ಮಣ, ನೂರ್ ಮೊಹಮದ್ ಬಂಧಿತ ಆರೋಪಿಗಳು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-25-1935843854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.