ಬಳ್ಳಾರಿ: ನಗರದ ವಿವಿಧ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಕಾನೂನುಬಾಹಿರವಾಗಿ ಮರಗಳನ್ನು ಕಡಿದು ಹಾಕಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಸಿದ್ದೇಶ ಊಳೂರು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಗೆ ದೂರು ನೀಡಿದ್ದಾರೆ.

ಇದರ ಜತೆಗೆ, ಸರ್ಕಾರ, ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೂ ಪ್ರತ್ಯೇಕ ಮನವಿಗಳನ್ನು ಅವರು ಸಲ್ಲಿಸಿದ್ದಾರೆ. ‘ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈಗಾಗಲೇ 25ಕ್ಕೂ ಹೆಚ್ಚು ಮರಗಳನ್ನು ಅನಧಿಕೃತವಾಗಿ ಕಡಿದು ಹಾಕಿದ್ದು, ಇದರಿಂದ ಬಿಸಿಲಿನ ತೀವ್ರತೆಯಿಂದ ಬಳಲುತ್ತಿರುವ ಬಳ್ಳಾರಿ ಜನತೆಗೆ ಶುದ್ಧ ಗಾಳಿ ಮತ್ತು ನೆರಳಿನ ಕೊರತೆ ಉಂಟಾಗಿದೆ’ ಎಂದು ಆರೋಪಿಸಿದ್ದಾರೆ.

‘ಮರಗಳ ತೆರವು ಕುರಿತು ಅರಣ್ಯ ಇಲಾಖೆಯ ಅನುಮತಿ, ಧೃಡೀಕೃತ ನಕ್ಷೆ ಹಾಗೂ ಅಗತ್ಯ ದಾಖಲೆಗಳನ್ನು ನೀಡದೇ ಇರುವುದರಿಂದ ಹಲವು ಅನುಮಾನಗಳು ಮೂಡಿವೆ’ ಎಂದು ತಿಳಿಸಿದ್ದಾರೆ.

‘ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನಿಯಮಗಳನ್ನು ಉಲ್ಲಂಘಿಸಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕರ್ನಾಟಕ ಅರಣ್ಯ ಅಧಿನಿಯಮ 1969ರಡಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಈಗಾಗಲೇ ಕಡಿದ ಮರಗಳಿಗೆ ಪರ್ಯಾಯವಾಗಿ 1ಕ್ಕೆ 10ರ ಅನುಪಾತದಲ್ಲಿ ಗಿಡ ನೆಟ್ಟು ನಗರದ ಹಸಿರೀಕರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-1531625328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.