ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದ ಆವರಣದಲ್ಲಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಈ ಸಂಬಂಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಇಬ್ಬರು ಕೈದಿಗಳು ಮತ್ತು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಏಪ್ರಿಲ್ 23ರಂದು ಮಧ್ಯಾಹ್ನ ಕಾರಾಗೃಹದ ಸಹಾಯಕ ಜೈಲರ್ ಎಂ.ಎಸ್. ಹಿರೇಮಠ ಮತ್ತು ತಂಡದವರು 8 ಮತ್ತು 9ನೇ ಬ್ಯಾರಕ್ನ ಆವರಣದಲ್ಲಿ ತಪಾಸಣೆ ನಡೆಸಿದ್ದರು. ಆಗ ಮೊಬೈಲ್ ಜಾಮರ್ ಟವರ್ ಪೈಪ್ನಲ್ಲಿ ಅಡಗಿಸಿಟ್ಟಿದ್ದ ಸ್ಯಾಮ್ಸಂಗ್ ಕಂಪನಿಯ ಕೀ-ಪ್ಯಾಡ್ ಮೊಬೈಲ್ ಪತ್ತೆಯಾಗಿತ್ತು.

ಏಪ್ರಿಲ್ 30ರಂದು ತಪಾಸಣೆ ವೇಳೆ ನಾಗರಾಜ ಮತ್ತು ಅಮರೇಶ ಮೂಡಕರ ಎಂಬುವರ ಬಳಿ ಒಂದೊಂದು ಮೊಬೈಲ್ ಪತ್ತೆಯಾಗಿತ್ತು. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-1598748308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.