ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಐವರು ಸಜಾಬಂಧಿಗಳ ಬಳಿ ನಿಷೇಧಿತ ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳು ಪತ್ತೆಯಾಗಿವೆ. ಈ ಸಂಬಂಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.

ಮೇ 2 ರಂದು ಮತ್ತು ಮೇ 17 ರಂದು ಜೈಲಿನ ಬ್ಯಾರಕ್ಗಳಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಜೈಲಿನ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಕೈದಿಗಳನ್ನು ಗುರುತಿಸಿ, ಅವರಿಂದ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜೈಲರ್ ಅಶೋಕ ಹೊಸಮನಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಜಾಬಂಧಿ ಬೋಜರಾಜ್ ಎಂಬಾತನ ಬಳಿ ಒಂದು ನೋಕಿಯಾ ಕೀಪ್ಯಾಡ್ ಮೊಬೈಲ್ ಮತ್ತು ಒಂದು ಸ್ಯಾಮ್ಸಂಗ್ ಮೊಬೈಲ್ ಹಾಗೂ ಒಂದು ಸಿಮ್ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ. ರಾಜು ಮಂಡಲ್ ಬಳಿ ಒಂದು ನೋಕಿಯಾ ಕೀಪ್ಯಾಡ್ ಫೋನ್ ಮತ್ತು ಏರ್ಟೆಲ್ ಸಿಮ್ ಕಾರ್ಡ್ ಪತ್ತೆಯಾಗಿದೆ. ತಿಪ್ಪೇಸ್ವಾಮಿಯಿಂದ ಒಂದು ನೋಕಿಯಾ ಕೀಪ್ಯಾಡ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಬ್ಯಾರಕ್ ಸಂಖ್ಯೆ 4ರಲ್ಲಿ ಗಸ್ತು ತಿರುಗುತ್ತಿದ್ದಾಗ ಶರಣಪ್ಪ ಎಂಬಾತನ ಬಳಿ ಮೊಟೊರೊಲಾ ಕೀಪ್ಯಾಡ್ ಫೋನ್ ಸಿಕ್ಕಿದೆ. ಶಿವಕುಮಾರ್ ಬಿ.ಆರ್ ಎಂಬುವವನ ಬಳಿ ಎಚ್.ಎಂ.ಡಿ ಕಂಪನಿಯ ಮೊಬೈಲ್ ಪತ್ತೆಯಾಗಿದೆ ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-25-1228507886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.