ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನಹೊಸಹಳ್ಳಿ | ಶರಣಬಸವೇಶ್ವರ ಜಾತ್ರೆ ಡಿ.21ರಿಂದ

Published 19 ಡಿಸೆಂಬರ್ 2023, 14:51 IST
Last Updated 19 ಡಿಸೆಂಬರ್ 2023, 14:51 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ: ಗಡಿ ಗ್ರಾಮ ಕಾನಮಡುಗು ದಾಸೋಹ ಮಠದ ಶರಣಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಡಿ.21ರಿಂದ 23ರವರೆಗೆ ನಡೆಯಲಿದೆ.

ಶರಣಬಸವೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಡಿ.21 ರಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನಂತರ ರಾತ್ರಿ 8 ಗಂಟೆಯಿಂದ ಹಾಸ್ಯ, ಸಾಂಸ್ಕೃತಿಕ ಹಾಗೂ ಭಜನಾ ಕಾರ್ಯಕ್ರಮಗಳು ನಡೆಯಲಿವೆ.

ಡಿ.22 ರಂದು ಬೆಳಗ್ಗೆ 10.30 ಗಂಟೆಗೆ ರಕ್ತದಾನ ಶಿಬಿರ, ಸಂಗೀತ ಸೇರಿ ಸಭಾ ಕಾರ್ಯಕ್ರಮ ಹಾಗೂ ಬೆಳಿಗ್ಗೆ 11.30 ರಿಂದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಲಿವೆ. ಸಂಜೆ 4 ಗಂಟೆಗೆ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯಲಿದ್ದು, ಸಂಜೆ 6.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

ಡಿ.23ರಂದು ಸಂಜೆ 6 ಗಂಟೆಗೆ ಕ್ಷೇತ್ರನಾಥ ಶ್ರೀ ಶರಣಬಸವೇಶ್ವರಸ್ವಾಮಿಯ ಪಲ್ಲಕ್ಕಿ ಉತ್ಸವ ಜರುಗಲಿದೆ. ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳು ಧರ್ಮಾಧಿಕಾರಿ ದಾ.ಮ.ಐಮಡಿ ಶರಣಾರ್ಯರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು, ಕೊಟ್ಟೂರು ಹಿರೇಮಠದ ಯೋಗಿ ರಾಜೇಂದ್ರ ಸ್ವಾಮೀಜಿ, ಮುಸ್ಟೂರಿನ ರುದ್ರಮುನಿ ಸ್ವಾಮೀಜಿ ಹಾಗೂ ಚನ್ನಗಿರಿ ಹಿರೇಮಠದ ಕೇದಾರಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ದಾ.ಮ.ಐಮಡಿ ಶರಣಾರ್ಯರು
ದಾ.ಮ.ಐಮಡಿ ಶರಣಾರ್ಯರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT