ಬಳ್ಳಾರಿ: ‘ರೈತರಿಂದ ವಶಪಡಿಸಿಕೊಂಡ ಭೂಮಿಯನ್ನು ಕೆಐಎಡಿಬಿ ನಿಯಮಬಾಹಿರವಾಗಿ ಜಿಂದಾಲ್ ಕಂಪನಿಗೆ ಪರಬಾರೆ ಮಾಡುತ್ತಿದೆ. ಈ ವಿಚಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಮೌನ ದುರದೃಷ್ಟಕರ’ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಸತ್ಯಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಒಂದೂವರೆ ದಶಕದ ಹಿಂದೆ ಕುಡಿತಿನಿ ಭಾಗದಲ್ಲಿ ಆರ್ಸೆಲರ್ ಮಿತ್ತಲ್ ಸೇರಿದಂತೆ ವಿವಿಧ ಕಂಪನಿಗಳಿಗಾಗಿ 12,500 ಎಕರೆ ಭೂಮಿಯನ್ನು ರೈತರಿಂದ ಪಡೆಯಲಾಗಿತ್ತು. ಈಗ ಅದರಲ್ಲಿನ 900 ಎಕರೆ ಭೂಮಿಯನ್ನು ಜಿಂದಾಲ್ಗೆ ನೀಡಲು ಸರ್ಕಾರ ಮುಂದಾಗಿದೆ. ಇದು ರೈತರಿಗೆ ಮಾಡುತ್ತಿರುವ ದ್ರೋಹ’ ಎಂದರು.

‘ನ್ಯಾಯ ಕೇಳಲು ಏ.29ರಂದು ಸಂಸದರು ಹಾಗೂ ಶಾಸಕರ ಕಚೇರಿಗೆ ಪಾದಯಾತ್ರೆ ನಡೆಸುತ್ತಿದ್ದ ರೈತರನ್ನು ಪೊಲೀಸರ ಮೂಲಕ ಬಂಧಿಸಿರುವುದು ಖಂಡನೀಯ. ಜಿಲ್ಲೆಯ ಶಾಸಕರು ಮತ್ತು ಸಂಸದರು ಜಿಂದಾಲ್ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ. ಈ ಹಿಂದೆ ‘ರಿಪಬ್ಲಿಕ್ ಆಫ್ ಬಳ್ಳಾರಿ’ ಎನಿಸಿಕೊಂಡಿದ್ದ ಜಿಲ್ಲೆ ಈಗ ‘ರಿಪಬ್ಲಿಕ್ ಆಫ್ ಜಿಂದಾಲ್’ ಆಗಿ ಬದಲಾದಂತಿದೆ’ ಎಂದು ಅವರು ಕಿಡಿಕಾರಿದರು.

ವಶಪಡಿಸಿಕೊಂಡ ಜಮೀನಿಗೆ ಪ್ರಸ್ತುತ ಮಾರುಕಟ್ಟೆ ದರದಂತೆ ನ್ಯಾಯಯುತ ಬೆಲೆ ನೀಡಬೇಕು.ಉದ್ದೇಶಿತ ಕೈಗಾರಿಕೆಗಳನ್ನು ತಕ್ಷಣ ಪ್ರಾರಂಭಿಸಿ, ಭೂಸಂತ್ರಸ್ತ ಕುಟುಂಬಗಳಿಗೆ ಉದ್ಯೋಗ ನೀಡಬೇಕು.

ಕೈಗಾರಿಕೆ ಸ್ಥಾಪಿಸಲು ಸಾಧ್ಯವಾಗದಿದ್ದರೆ ರೈತರ ಭೂಮಿಯನ್ನು ಅವರಿಗೇ ವಾಪಸ್ ನೀಡಬೇಕು.ಮೇ 2 ರಿಂದ ಸರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಬಳ್ಳಾರಿ ಬಂದ್ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ಎಂ.ತಿಪ್ಪೇಸ್ವಾಮಿ, ಜಂಗ್ಲಿಸಾಬ್, ಚಂದ್ರಕುಮಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-25-2091991671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.