ಕಂಪ್ಲಿ: ‘ಪಟ್ಟಣದಲ್ಲಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಸ್ಥಾಪನೆಗೆ ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ’ ಎಂದು ಜೆ.ಎನ್. ಗಣೇಶ್ ತಿಳಿಸಿದರು.

‘ನೂತನ ತಾಲ್ಲೂಕು ಕೇಂದ್ರವಾದ ಬಳಿಕ ನ್ಯಾಯಾಲಯ ಇಲ್ಲದೆ ಕಕ್ಷಿದಾರರು ಪರದಾಡುತ್ತಿದ್ದರು. ಅದನ್ನು ಮನಗಂಡು ಸರ್ಕಾರದಿಂದ ನ್ಯಾಯಾಲಯ ಸ್ಥಾಪನೆಗೆ ಅನುಮೋದನೆ ಪಡೆಯಲಾಯಿತು. ಬಳಿಕ ಸ್ಥಳೀಯ ವಕೀಲರ ಬಳಗದವರು ನ್ಯಾಯಾಲಯ ಕಟ್ಟಡಕ್ಕಾಗಿ ಪುರಸಭೆಗೆ ಮನವಿ ಸಲ್ಲಿಸಿದರು.

ನಂತರ ಜಿಲ್ಲಾಧಿಕಾರಿಗಳೊಂದಿಗೆ ಈ ಕುರಿತು ಸಮಾಲೋಚಿಸಿ ಮಾರುತಿ ನಗರದ ಉದ್ಯಾನದಲ್ಲಿದ್ದ ಪುರಸಭೆ ಕಟ್ಟಡದಲ್ಲಿ ತಾತ್ಕಾಲಿಕ ನ್ಯಾಯಾಲಯ ಆರಂಭಕ್ಕೆ ಅನುಮತಿ ಪಡೆದು, ಅದಕ್ಕಾಗಿ ₹ 25ಲಕ್ಷ ಅನುದಾನದ ವ್ಯವಸ್ಥೆ ಮಾಡಿ ಕಟ್ಟಡ ನವೀಕರಿಸಿಲಾಯಿತು. ಇಷ್ಟೆಲ್ಲ ನಿರಂತರ ಯತ್ನದಿಂದ ನ್ಯಾಯಾಲಯ ಭಾನುವಾರ ಉದ್ಘಾಟನೆಗೊಂಡಿದೆ’ ಎಂದು ಭಾನುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

‘ನಂ.10 ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಜಾಸೌಧದ ಬಳಿ 3.12ಎಕರೆ ಭೂಮಿಯನ್ನು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಮೀಸಲಿರಿಸಲಾಗಿದೆ. ಇಲ್ಲಿ ನ್ಯಾಯಾಲಯ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ₹ 25ಕೋಟಿ ಅನುದಾನ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಿಸಿದ್ದು, ಮಂಜೂರಾತಿ ಹಂತದಲ್ಲಿದೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-25-989244141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.