ಕಂಪ್ಲಿ: ತಾಲ್ಲೂಕಿನ ನಂ.10 ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಜಾಸೌಧ ಬಳಿ ಕೆ.ಕೆ.ಆರ್.ಡಿ.ಬಿ ಯೋಜನೆಯ ₹2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಜೆ.ಎನ್. ಗಣೇಶ್ ಗುರುವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಶಾಸಕರು ಮಾತನಾಡಿ, ‘ತಾಲ್ಲೂಕಿನಲ್ಲಿ ಬೆಂಕಿ ಅವಘಡಗಳು ಸಂಭವಿಸಿದಾಗ ಹೊಸಪೇಟೆ, ಗಂಗಾವತಿ, ಕುರುಗೋಡು ಅಗ್ನಿಶಾಮಕದಳದವರನ್ನು ಆಶ್ರಯಿಸಬೇಕಿತ್ತು. ಇದೀಗ ಎರಡು ಎಕರೆ ಪ್ರದೇಶದಲ್ಲಿ ಈ ಠಾಣೆ ನಿರ್ಮಾಣಗೊಂಡು ಮುಂದಿನ ದಿನಗಳಲ್ಲಿ ಕಾರ್ಯಾರಂಭ ಮಾಡುವುದರಿಂದ ಅನುಕೂಲವಾಗಲಿದೆ’ ಎಂದರು.

‘₹3 ಕೋಟಿ ವೆಚ್ಚದಲ್ಲಿ ಪ್ರಜಾಸೌಧ ಮುಂಭಾಗವನ್ನು ಅಭಿವೃದ್ಧಿಪಡಿಸಿದ ನಂತರ ಮುಖ್ಯಮಂತ್ರಿಗಳಿಂದ ಸೌಧ ಉದ್ಘಾಟಿಸಲಾಗುವುದು’ ಎಂದರು.

‘₹4.60 ಕೋಟಿ ವೆಚ್ಚದಲ್ಲಿ ಪಟ್ಟಣದ 36 ರಸ್ತೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಪಟ್ಟಣದ 5 ಮತ್ತು 12 ವಾರ್ಡ್ಗಳಲ್ಲಿ ₹33 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆ ಇದೆ. 100 ಹಾಸಿಗೆ ಆಸ್ಪತ್ರೆ ಉದ್ಘಾಟನೆ, ಇಲ್ಲಿನ ತುಂಗಭದ್ರಾ ನದಿಗೆ ನೂತನ ಸೇತುವೆ ನಿರ್ಮಾಣ ಮತ್ತು ಸೋಮಪ್ಪ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಕಣಿವಿತಿಮ್ಮಲಾಪುರ ಗ್ರಾಮದಲ್ಲಿ ₹3 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.

ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ತಿಮ್ಮಾರೆಡ್ಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್, ಪೊಲೀಸ್ ಗೃಹ ನಿರ್ಮಾಣ ಮಂಡಳಿ ಎಇಇ ಚಂದ್ರಕಾಂತ, ಜೆ.ಇ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ರೆಹಮಾನ್, ಪ್ರಮುಖರಾದ ಕೆ.ಎಂ. ಹೇಮಯ್ಯಸ್ವಾಮಿ, ಸಿ.ಆರ್. ಹನುಮಂತ, ಕೆ.ಮಸ್ತಾನ್, ಬಿ.ಜಾಫರ್, ಬಳೆ ಮಲ್ಲಿಕಾರ್ಜುನ, ವಾಲ್ಮೀಕಿ ರಘು, ವಿಪ್ರದ ನಾರಾಯಣಪ್ಪ, ಬಳ್ಳಾರಿ ಮಾಧವ, ಪಿಡಿಒ ಶಿಲ್ಪಾರಾಣಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-25-1824158701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.