ಕಂಪ್ಲಿ: ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಚರ್ಚಿಸಲಾಯಿತು.

ತಹಶೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ‘ಮೂರು ತಿಂಗಳಲ್ಲಿ ಮಕ್ಕಳ ಸಹಾಯವಾಣಿಯ ನಾಲ್ಕು ಕರೆಗಳನ್ನು ಸ್ವೀಕರಿಸಿದ್ದು, ಅದರಲ್ಲಿ ಮೂರು ಸುಳ್ಳು ಕರೆಗಳಾಗಿದ್ದವು. ಒಂದು ಬಾಲ್ಯ ವಿವಾಹ ತಡೆಗಟ್ಟಿದೆ. ಮೂರು ಪೋಕ್ಸೋ ಪ್ರಕರಣ ದಾಖಲಾಗಿವೆ’ ಎಂದು ವಿವರಿಸಿದರು.

‘ಸರ್ಕಾರಿ, ಖಾಸಗಿ ಶಾಲೆ, ವಸತಿ ನಿಲಯಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿಗೆ ಪೋಕ್ಸೋ ಕಾಯ್ದೆ ಕುರಿತು ತರಬೇತಿ ನೀಡಬೇಕು. ಅವರು ಪೊಲೀಸ್ ಇಲಾಖೆಯಿಂದ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಪ್ರಮಾಣಪತ್ರಗಳನ್ನು ತಪ್ಪದೆ ಪಡೆಯುವಂತೆ ಸೂಚಿಸಲಾಗಿದೆ. ಏಳು ದಿನಗಳಿಗಿಂತ ಹೆಚ್ಚು ಗೈರಾದ ಮಕ್ಕಳ ಪಟ್ಟಿಯನ್ನು ಪಿಡಿಒಗಳಿಗೆ ಸಂಬಂಧಿಸಿದವರು ನೀಡಬೇಕು’ ಎಂದು ತಿಳಿಸಿದರು.

ತಾಲ್ಲೂಕಿನ ಅಪ್ರಾಪ್ತೆಯೊಬ್ಬರು ಬೇರೆ ತಾಲ್ಲೂಕಿನಲ್ಲಿ ಅಭ್ಯಾಸ ಮಾಡುವಾಗ ಗರ್ಭಿಣಿಯಾಗಿರುವುದು ವರದಿಯಾಗಿದೆ. ಈ ಮಧ್ಯೆ ಬಾಲಕಿ ಪೋಷಕರು ವಿಳಾಸ ಬದಲಿಸಿದ್ದಾರೆ. ಸದ್ಯ ಬಾಲಕಿಯ ವಿವರ ಅರಿಯಬೇಕಾದರೆ ವಿಳಾಸ ಪತ್ತೆ ಮಾಡಬೇಕಿದ್ದು, ಈ ಕುರಿತು ಸಭೆಯಲ್ಲಿ ಅಧಿಕಾರಿಗಳು ಗಂಭೀರ ಚರ್ಚೆ ನಡೆಸಿದರು.

ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ರೀಡ್ಸ್ ಜಿಲ್ಲಾ ಸಂಯೋಜಕಿ ಸೀತಾಮಹಾಲಕ್ಷಿ, ತಾಲ್ಲೂಕು ಸಂಯೋಜಕ ಕರಿಸ್ವಾಮಿ, ಮಕ್ಕಳ ಹಕ್ಕುಗಳ ನಿಗಾ ಘಟಕದ ಸದಸ್ಯ ಎಚ್.ಸಿ. ರಾಘವೇಂದ್ರ, ಸಂಯೋಜಕಿ ಲಕ್ಷ್ಮಿ, ಮಕ್ಕಳ ಸಹಾಯವಾಣಿ ಸಂಯೋಜಕ ಕೆ. ಆನಂದ, ಮಹಿಳಾ ಮೇಲ್ವಿಚಾರಕಿ ಲತೀಫಾಬೇಗಮ್, ಇಸಿಒ ಎಂ. ರೇವಣ್ಣ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-25-1274621517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.